ಬೆಳಗಾವಿ : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಹಣದಿಂದ ಹಲವು ಮಹಿಳೆಯರು ಲಾಭ ಪಡೆಯುತ್ತಿದ್ದು, ಕೆಲ ದಿನಗಳ ಹಿಂದೆ ಮಹಿಳೆಯೊಬ್ಬರ ಫ್ರಿಡ್ಜ್ ಖರೀದಿಸಿದ್ದರು. ಬಳಿಕ ಮತ್ತೊಬ್ಬ ಮಹಿಳೆ ಹೊಸ ಮೊಬೈಲ್ ಫೋನ್ ಖರೀದಿಸಿದ್ದರು. ಇದೀಗ ಮಹಿಳೆಯೊಬ್ಬರು ಗೃಹಲಕ್ಷ್ಮಿ ಹಣದಿಂದ ಕಣ್ಣಿನ ಆಪರೇಷನ್ ಮಾಡಿಸಿಕೊಂಡಿದ್ದಾರೆ.
ಹೌದು, ಬೆಳಗಾವಿಯ ರಾಮದುರ್ಗದ ಸುರೇಬಾನ ಮನಿಹಾಳ ಗ್ರಾಮದ ಮಹಿಳೆಯೊಬ್ಬರು ಕಳೆದ 10 ತಿಂಗಳ ಗೃಹಲಕ್ಷ್ಮಿ ಹಣವನ್ನು ಕೂಡಿಟ್ಟು, ಕಣ್ಣಿನ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದಾರೆ. ರಾಮದುರ್ಗದ ಮನಿಹಾಳ ಗ್ರಾಮದ ಸಕ್ಕುಬಾಯಿ ಈರಣ್ಣ ಅವರು ಗೃಹಲಕ್ಷ್ಮಿ ಯೋಜನೆಯ ಹಣವನ್ನು ಕೂಡಿಟ್ಟು ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರೆ.
ಗೃಹಲಕ್ಷ್ಮಿ ಯೋಜನೆಯ ಹಣದಿಂದ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡ ಸಕ್ಕುಬಾಯಿ ಈರಣ್ಣ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಧನ್ಯವಾದ ತಿಳಿಸಿದ್ದಾರೆ.