ದಕ್ಷಿಣಕನ್ನಡ : ಬೆಂಬಲಿಗರ ಪರವಾಗಿ ಪೊಲೀಸ್ ಠಾಣೆಯ ಆವರಣದಲ್ಲಿ ಧರಣಿ ಹಾಗೂ ಠಾಣೆಯ ಪಿಎಸ್ಐಗೆ ಧಮ್ಕಿ ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ ಇದೀಗ ವಿಟ್ಲ ಠಾಣೆಯ ಪೊಲೀಸ್ ಅಧಿಕಾರಿಗಳು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಹಾಗೆ ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಹೌದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾಗೆ ನೋಟಿಸ್ ಜಾರಿ ಮಾಡಲಾಗಿದೆ. ವಿಟ್ಲ ಠಾಣೆಯ ಪೊಲೀಸರಿಂದ ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದುಬಂದಿದೆ. ವಿಟ್ಲ ಠಾಣೆಯ ಇನ್ಸ್ಪೆಕ್ಟರ್ ನಾಗರಾಜ್ ಹಾಗೂ ಸಬ್ ಇನ್ಸ್ಪೆಕ್ಟರ್ ನಂದಕುಮಾರ್ ಅವರಿಂದ ನೋಟಿಸ್ ನೀಡಲಾಗಿದೆ ಎಂದು ತಿಳಿದು ಬಂದಿದೆ. ತತನಿಕಾಧಿಕಾರಿಗಳ ಜೊತೆಗೆ ಠಾಣೆಗೆ ಬರುವಂತೆ ನೋಟಿಸ್ ನೀಡಿದ್ದಾರೆ.
ಈ ಒಂದು ಘಟನೆಗೆ ಸಂಬಂಧಿಸಿದಂತೆ ಇಂದು ಹರೀಶ್ ಪೂಂಜಾ ಅವರನ್ನು ಬಂಧಿಸಲು ಪೊಲೀಸರು ತೆರಳಿದಾಗ, ಅವರ ನಿವಾಸದ ಮುಂದೆ ಬಾರಿ ಹೈಡ್ರಾಮಾ ನಡೆಯಿತು.ಹರೀಶ್ ಪೂಂಜಾ ಅವರ ಬೆಂಬಲಿಗರು ಹಾಗೂ ಕಾರ್ಯಕರ್ತರು ಪೊಲೀಸರೊಂದಿಗೆ ವಾಗ್ವಾದಕ್ಕೆ ಇಳಿದರು. ಪೊಲೀಸರ ಈ ವರ್ತನೆಗೆ ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ.