ಮೈಸೂರು : ಕಾಂಗ್ರೆಸ್ ಕಾರ್ಯಕರ್ತೆ ಹಾಗೂ ಸ್ಯಾಂಡಲ್ ವುಡ್ ನಟಿ ವಿದ್ಯಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕೊಲೆ ಮಾಡಿ ಪರಾರಿಯಾಗಿದ್ದ ಪತಿ ನಂದೀಶನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
ಪತ್ನಿ ವಿದ್ಯಾ ಹತ್ಯೆಗೈದು ಮಂಡ್ಯದಲ್ಲಿ ಪತಿ ನಂದೀಶ್ ತಲೆಮರಿಸಿಕೊಂಡಿದ್ದ. ಬನ್ನೂರು ಇನ್ಸ್ಪೆಕ್ಟರ್ ಪುನೀತ್ ನೇತೃತ್ವದಲ್ಲಿ ಇದೀಗ ನಂದೀಶ ಬಂಧನವಾಗಿದೆ. ಆರೋಪಿಯನ್ನು ಬಂಧಿಸಿ ಇದೀಗ ಪೊಲೀಸರು ಬನ್ನೂರಿಗೆ ಕರೆ ತರುತ್ತಿದ್ದಾರೆ ಎಂದು ತಿಳಿದುಬಂದಿದೆ. ಮೇ 20ರಂದು ರಾತ್ರಿ ಸುತ್ತಿಗೆಯಿಂದ ಹೊಡೆದು ಪತಿ ನಂದೀಶ್ ಕೊಂದಿದ್ದ. ಮೈಸೂರು ಜಿಲ್ಲೆಯ ಟಿ ನರಸೀಪುರ ತಾಲ್ಲೂಕಿನ ತುರಗನೂರು ಗ್ರಾಮದಲ್ಲಿ ನಟಿ ವಿದ್ಯಾ ಕೊಲೆಯಾಗಿತ್ತು.
ಮೇ 20 ರಂದು ವಿದ್ಯಾ ಕೊಲೆ
ಮೇ 20 ರಂದು ಮೈಸೂರು ಜಿಲ್ಲೆಯ ಟಿ ನರಸೀಪುರ ತಾಲ್ಲೂಕಿನ ತುರಗನೂರು ಗ್ರಾಮದಲ್ಲಿ ನಟಿ ವಿದ್ಯಾ ಕೊಲೆಯಾಗಿತ್ತು.ಪತಿಯೇ ತನ್ನ ಪತ್ನಿಯನ್ನು ಕೊಲೆ ಮಾಡಿದ್ದಾನೆ. ಮೈಸೂರು ನಗರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿದ್ಯಾ ಕೊಲೆಯಾದ ದುರ್ದೈವಿಯಾಗಿದ್ದು, ಕೌಟುಂಬಿಕ ಕಲಹ ಹಿನ್ನೆಲೆ ಗಂಡನೇ ವಿದ್ಯಾಳ ಕೊಲೆ ಮಾಡಿರುವ ಆರೋಪ ಕೇಳಿ ಬಂದಿದೆ.
ಕನ್ನಡದ ಕೆಲ ಸಿನಿಮಾಗಳಲ್ಲಿ ಪೋಷಕ ನಟಿಯಾಗಿ ಬಣ್ಣ ಹಚ್ಚಿದ್ದರು. ಮೃತ ವಿದ್ಯಾ ಅವರು ಭಜರಂಗಿ, ವಜ್ರಕಾಯ ಸಿನಿಮಾದಲ್ಲಿ ನಟಿಸಿದ್ದರು. ಅಲ್ಲದೇ ಕಾಂಗ್ರೆಸ್ ಪಕ್ಷದಲ್ಲೂ ಸಕ್ರೀಯವಾಗಿದ್ದರು. ಸೋಮವಾರ ರಾತ್ರಿ ಗಂಡ ಹಾಗೂ ಪತ್ನಿ ನಡುವೆ ಜಗಳ ನಡೆದಿದ್ದು, ಈ ವೇಳೆ ಮಾತಿಗೆ ಮಾತು ಬೆಳೆದು ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ಬನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.