ಬೆಂಗಳೂರು : ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಶಿಕ್ಷಣ ಇಲಾಖೆ ಸಿಹಿಸುದ್ದಿ ನೀಡಿದ್ದು, ಖಾಸಗಿ ಶಾಲೆಗಳಲ್ಲಿ ವಸೂಲಿ ಮಾಡಲಾಗುವು ಹೆಚ್ಚಿನ ಶುಲ್ಕಕ್ಕೆ ಕಡಿವಾಣ ಹಾಕಿದೆ.
2024-25ನೇ ಶೈಕ್ಷಣಿಕ ಸಾಲಿಗೆ ಖಾಸಗಿ ಅನುದಾನರಹಿತ ಶಾಲೆಗಳಲ್ಲಿ ನಿಗದಿಪಡಿಸಿರುವ ಶುಲ್ಕದ ವಿವರ ಪ್ರಕಟಿಸುವಂತೆ ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ.
ಖಾಸಗಿ ಅನುದಾನರಹಿತ ಶಾಲೆಗಳಲ್ಲಿ 2024-25ನೇ ಶೈಕ್ಷಣಿಕ ಸಾಲಿಗೆ ವಿದ್ಯಾರ್ಥಿಗಳ ದಾಖಲಾತಿ ಮತ್ತು ಶುಲ್ಕ ವಸೂಲಾತಿ ಪ್ರಕ್ರಿಯೆ ಪ್ರಾರಂಭವಾಗಿರುತ್ತದೆ. ದಾಖಲಾತಿ ಪ್ರಕ್ರಿಯೆ, ದಾಖಲಾತಿ ಶುಲ್ಕ ಮತ್ತು ಇನ್ನಿತರೆ ಶುಲ್ಕವನ್ನು ಪಡೆಯುವ ಸಂಬಂಧ ಉಲ್ಲೇಖದ ಶಿಕ್ಷಣ ಹಕ್ಕು ಕಾಯಿದೆ -2009 ರನ್ವಯ ಈ ಕೆಳಕಂಡಂತೆ ತಿಳಿಸಲಾಗಿದೆ.
Section 2(b) capitaton fee” means any kind of donation or contribution or payment other than the fee notified by the school;
Section 13 No capitation fee and screening procedure for admission.-
(1) No school or person shall, while admitting a child, collect any capitation fee and subject the child or his or her parents or guardian to any screening procedure.
(2) Any school or person, if in contravention of the provisions of sub-section (1),-
(a) receives capitation fee, shall be punishable with fine which may extend to ten times the capitation fee charged:
(b) subjects a child to screening procedure, shall be punishable with fine which may extend to twenty-five thousand rupees for the first contravention and fifty thousand rupees for each subsequent contraventions.
ಶಿಕ್ಷಣ ಹಕ್ಕು ಕಾಯ್ದೆ-2009 ರ ಸೆಕ್ಷನ್-2(b) ರಂತೆ ಎಲ್ಲಾ ಖಾಸಗಿ ಶಾಲೆಗಳು ತಾವು ಅಧಿಸೂಚಿಸಿದ ಶುಲ್ಕವನ್ನು ತಮ್ಮ ಶಾಲಾ ಜಾಲತಾಣದಲ್ಲಿ. ಶಾಲಾ ಸೂಚನಾ ಫಲಕದಲ್ಲಿ ಮತ್ತು ಇಲಾಖಾ ಜಾಲತಾಣದಲ್ಲಿ (SATS) ನಾರ್ವಜನಿಕರು ಮತ್ತು ಪೋಷಕರಿಗೆ ಲಭ್ಯವಾಗುವಂತೆ ಪ್ರಕಟಪಡಿಸಲು ಹಾಗೂ ಶುಲ್ಕ ವಸೂಲಾತಿ ಮತ್ತು ವಿದ್ಯಾರ್ಥಿಗಳ ದಾಖಲಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಸೆಕ್ಷನ್-13ರ ಅಂಶಗಳನ್ನು ಕಡ್ಡಾಯವಾಗಿ ಪಾಲಿಸಲು ತಿಳಿಸಿದೆ.
ತಮ್ಮ ವ್ಯಾಪ್ತಿಯ ಯಾವುದೇ ಶಾಲೆಗಳು ಸೆಕ್ಷನ್-2(b) ಮತ್ತು ಸೆಕ್ಷನ್ 13(1) ಅನ್ನು ಉಲ್ಲಂಘಿಸಿರುವ ಬಗ್ಗೆ ದೂರುಗಳು ದಾಖಲಾದಲ್ಲಿ, ಸೆಕ್ಷನ್ 13(2)a ಮತ್ತು ಸೆಕ್ಷನ್ 13(2)b ರಂತೆ ಹಾಗೂ ಕರ್ನಾಟಕ ಕಡ್ಡಾಯ ಮತ್ತು ಉಚಿತ ಪ್ರಾಥಮಿಕ ಶಿಕ್ಷಣ ಹಕ್ಕು ನಿಯಮಗಳು-2012 ರ ನಿಯಮ-23ರಲ್ಲಿ ತಿಳಿಸಿದಂತೆ ಅಗತ್ಯ ಕ್ರಮವಹಿಸಲು ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಉಪನಿರ್ದೇಶಕರಿಗೆ ಸೂಚಿಸಿದೆ.