ಮೈಸೂರು : ಇತ್ತೀಚಿಗೆ ಮೈಸೂರು ತಾಲೂಕಿನ ಕೆ.ಸಾಲುಂಡಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಓರ್ವ ಯುವಕ ಸಾವನ್ನಪ್ಪಿದ್ದು, ಹಲವರು ಜನರು ಅಸ್ವಸ್ಥರಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪಟ್ಟಣ ಪಂಚಾಯಿತಿಯ ಮೂವರು ಅಧಿಕಾರಿಗಳ ಅಮಾನತು ಮಾಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣ ಸಂಬಂಧ ಡಿಸಿ ವರದಿ ಅಧರಿಸಿ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಲಾಗಿದೆ. ನಿಯಮಿತವಾಗಿ ಕುಡಿಯುವ ನೀರಿನ ಟ್ಯಾಂಕರ್ ಸ್ವಚ್ಛಗೊಳಿಸಲು ಸೂಚಿಸಿದ್ದೇನೆ.ಕೆ ಸಾಲುಂಡಿ ಗ್ರಾಮಕ್ಕೆ ಕಲುಷಿತ ನೀರು ಪೂರೈಕೆಯಾಗಿದೆ. ಕುಡಿಯುವ ನೀರನ್ನು ಯಾರು ಟೆಸ್ಟ್ ಮಾಡಿಲ್ಲ. ಹೀಗಾಗಿ ಘಟನೆ ನಡೆದಿದೆ ನಂದ ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದರು.
ಇನ್ನು ಅಶ್ಲೀಲ ವಿಡಿಯೋ ಪ್ರಕರಣ ಹಾಗೂ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶದಲ್ಲಿರುವ ಪ್ರಜ್ವಲ್ ರೇವಣ್ಣಗೆ ಎಚ್ ಡಿ ದೇವೇಗೌಡರು ಪತ್ರ ಬರೆದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು ವಿದೇಶಕ್ಕೆ ಕಳುಹಿಸಿದ್ದೇ ಅವರು ಈಗ ಪತ್ರ ಬರೆದು ಏನು ಮಾಡುತ್ತಾರೆ ಎಂದು ಪ್ರಶ್ನಿಸಿದರು.