ಬೆಂಗಳೂರು: ಶಾಸಕ ಎಚ್.ಡಿ.ರೇವಣ್ಣ ವಿರುದ್ಧ ಮಹಿಳೆಯೊಬ್ಬರು ದಾಖಲಿಸಿದ್ದ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (ಎಸ್ಐಟಿ) ಅಧಿಕಾರಿಗಳು ಕಾರು ಚಾಲಕ ಅಜಿತ್ ಅವರಿಗೆ ನೋಟಿಸ್ ನೀಡಿದ್ದಾರೆ.
ಅಜಿತ್, ರೇವಣ್ಣ ಅವರ ಪತ್ನಿ ಭವಾನಿ ಅವರ ಕಾರು ಚಾಲಕ ಎನ್ನಲಾಗಿದೆ. ಮೂಡಲಹಿಪ್ಪೆ ಗ್ರಾಮದ ಅಜಿತ್ ಅವರ ಮನೆಗೆ ಭೇಟಿ ನೀಡಿದ ಎಸ್ಐಟಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ.
ಅಜಿತ್ ಗೆ ಈಗಾಗಲೇ ನೋಟಿಸ್ ನೀಡಲಾಗಿದೆ ಎಂದು ಹೇಳಲಾಗುತ್ತಿದೆ. ಅವರು ವಿಚಾರಣೆಗೆ ಹಾಜರಾಗಿರಲಿಲ್ಲ .
ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ತನಿಖೆಯನ್ನು ಚುರುಕುಗೊಳಿಸಿದೆ. ಇನ್ನೂ ಹಲವರಿಗೆ ನೋಟಿಸ್ ನೀಡಲು ಸಿದ್ಧತೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ