ಬೆಂಗಳೂರು: ನೈಋತ್ಯ ಪದವೀಧರ ಕ್ಷೇತ್ರದಿಂದ ವಿಧಾನ ಪರಿಷತ್ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಉಡುಪಿಯ ಮಾಜಿ ಶಾಸಕ ರಘುಪತಿ ಭಟ್ ಅವರಿಗೆ ಲಿಂಗರಾಜ ಪಾಟೀಲ್ ನೇತೃತ್ವದ ಬಿಜೆಪಿ ರಾಜ್ಯ ಶಿಸ್ತು ಸಮಿತಿ ಶೋಕಾಸ್ ನೋಟಿಸ್ ಜಾರಿ ಮಾಡಿದೆ.
ಮೇ 22ರಂದು ಹೊರಡಿಸಲಾದ ನೋಟಿಸ್ ನಲ್ಲಿ ಭಟ್ ಅವರು ಸ್ವತಂತ್ರ ಅಭ್ಯರ್ಥಿಯಾಗಿ ಏಕೆ ಸ್ಪರ್ಧಿಸುತ್ತಿದ್ದಾರೆ ಎಂಬುದನ್ನು ವಿವರಿಸಲು 48 ಗಂಟೆಗಳ ಗಡುವು ನೀಡಲಾಗಿದೆ