ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣರಿಗೆ ವಿದೇಶಾಂಗ ಸಚಿವಾಲಯದಿಂದ ಶೋಕಾಸ್ ನೋಟಿಸ್ ನೀಡಿದೆ. ಶೋಕಾಸ್ ನೋಟಿಸ್‌ಗೆ ಉತ್ತರನೀಡುವಂತೆ ಸೂಚನೆ ನೀಡಿದೆ ಎನ್ನಲಾಗಿದೆ.
ಈಗಾಗಲೇ ಪ್ರಜ್ವಲ್ ರೇವಣ್ಣ ವಿರುದ್ಧ ಮೂರು ಪ್ರತ್ಯೇಕ ಅತ್ಯಾಚಾರ ಪ್ರಕರಣಗಳು ದಾಖಲಾಗಿದ್ದು, ತನಿಖೆ ಕೂಡ ನಡೆಸಲಾಗುತ್ತಿದೆ. ಇನ್ನೂ ನೋಟಿಸ್‌ಗೆ ಸಂಬಂಧಪಟ್ಟಂತೆ ಪ್ರಜ್ವಲ್ ರೇವಣ್ಣ ಉತ್ತರ ನೀಡಲೇ ಬೇಕಾದ ಅನಿವಾರ್ಯತೆ ನಿರ್ಮಾಣವಾಗಿದೆ. ಈಗಾಗಲೇ ತಲೆ ಮರೆಸಿಕೊಂಡಿರುವ ಪ್ರಜ್ವಲ್ ರೇವಣ್ಣ ಪಾಸ್‌ಪೋರ್ಟ್ ಅನ್ನು ರದ್ದು ಮಾಡುವುದಕ್ಕೆ ಎಸ್‌ಐಟಿ ಹಾಗೂ ಸಿಎಂ ಸಿದ್ದರಾಮಯ್ಯ ಅವರು ಪತ್ರ ಬರೆದಿದ್ದಾರೆ.