ಬೆಂಗಳೂರು : ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಮುಂದಿನ 24 ಗಂಟೆಗಳಲ್ಲಿ ರಾಜ್ಯದಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ. ಹಾಗಾಗಿ ರಾಜ್ಯದ 11 ಜಿಲ್ಲೆಗಳಲ್ಲಿ ಎಲ್ಲೋ ಘೋಷಿಸಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ ಎಂದು ತಿಳಿದುಬಂದಿದೆ.
ಹೌದು ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಮುಂದಿನ 24 ಗಂಟೆಗಳ ಕಾಲ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಒಳನಾಡಿನ ಧಾರವಾಡ, ಗದಗ, ಹಾವೇರಿ, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಅದೇ ರೀತಿಯಾಗಿ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗಾಳಿಯು ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಬೀಸಲಿದೆ. ಇದರ ಜೊತೆ ಭಾರೀ ಮಳೆ ಆಗುವ ಸಾಧ್ಯತೆ ಕೂಡ ಹೆಚ್ಚಿದೆ.