ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ಸಂಸದ ಪ್ರಜ್ವಲ್ ರೇವಣ್ಣ ವಿದೇಶದಲ್ಲಿ ತಲೆಮರಿಸಿಕೊಂಡಿದ್ದಾರೆ. ಈ ಕುರಿತಂತೆ ನಿನ್ನೆ ಎಚ್ ಡಿ ದೇವೇಗೌಡರು ಪ್ರಜ್ವಲ್ ಗೆ ಪತ್ರ ಬರೆದಿದ್ದು ಎಲ್ಲೇ ಇದ್ದರೂ ಬಂದು ಶರಣಾಗು ಎಂದು ತಿಳಿಸಿದ್ದರು. ಇದೀಗ ಸಿಎಂ ಸಿದ್ದರಾಮಯ್ಯ ಇದಕ್ಕೆ ಪ್ರತಿಕ್ರಿಯೆ ಸಿದ್ದು ಪ್ರಜ್ವಲ್ ಅನ್ನು ಕುಟುಂಬದಿಂದ ಹೊರ ಹಾಕುತ್ತೇವೆ ಎಂದು ದೇವೇಗೌಡರಿಗೆ ವಿದೇಶಕ್ಕೆ ಹೋಗುವುದು ಗೊತ್ತಿರಲಿಲ್ಲವೇ ಎಂದು ಪ್ರಶ್ನಿಸಿದ್ದಾರೆ.
ಟ್ವೀಟ್ ನಲ್ಲಿ ವಾಗ್ದಾಳಿ ನಡೆಸಿರುವ ಅವರು, ಮಾಜಿ ಮುಖ್ಯಮಂತ್ರಿ HD ಕುಮಾರಸ್ವಾಮಿ ಅವರ ಅಣ್ಣನ ಮಗ ಅತ್ಯಾಚಾರ ಪ್ರಕರಣದಲ್ಲಿ ಆರೋಪಿ. ಅತ್ಯಾಚಾರದ ವೀಡಿಯೊ ಹರಿದಾಡಿತು ಎನ್ನುವುದಕ್ಕಿಂತ, ಅತ್ಯಾಚಾರ ಘೋರ ಅಪರಾಧ. ಅತ್ಯಾಚಾರದ ಸಂಗತಿಯನ್ನು ದುರ್ಬಲಗೊಳಿಸಲು ಡಿ.ಕೆ. ಶಿವಕುಮಾರ್ ಹಾಗೂ ಮತ್ತೊಬ್ಬರ ಮೇಲೆ ಹೇಳುತ್ತಿದ್ದಾರೆ. ಅವರು ಈ ನೆಲದ ಕಾನೂನಿಗೆ ಗೌರವ ಕೊಡಬೇಕು. ಅಣ್ಣನ ಮಗ ಅಪರಾಧಿಯಲ್ಲ ಆರೋಪಿ ಅಷ್ಟೇ ಎಂದಿದ್ದಾರೆ, ನ್ಯಾಯಾಲಯದಲ್ಲಿ ವಿಚಾರಣೆಗೆ ಒಳಪಟ್ಟಂತೆ ನಾನೂ ಕೂಡ ಆರೋಪಿ ಎಂದೇ ಹೇಳಿದ್ದೇನೆ.
ಪ್ರಜ್ವಲ್ ರೇವಣ್ಣ ಅವರ ಪಾಸ್ ಪೋರ್ಟ್ ರದ್ದತಿಗೆ ಮೋದಿಯವರಿಗೆ ಪತ್ರ ಬರೆದಿದ್ದು ಈವರೆಗೆ ಅವರಿಂದ ಪ್ರತಿಕ್ರಿಯೆ ಬಂದಿಲ್ಲ. ಎಲ್ಲರಿಗೂ ಪ್ರಧಾನಮಂತ್ರಿಗಳ ಕಚೇರಿಯಿಂದ ಕೂಡಲೇ ಉತ್ತರ ದೊರಕುತ್ತದೆ ಎಂದು ನಂಬಿರುವುದೇ ನಿಮ್ಮ ತಪ್ಪು. ನಾವು ಬರೆದಿರುವ ಅನೇಕ ಪತ್ರಗಳಿಗೆ ಅವರು ಉತ್ತರ ಕೊಟ್ಟಿಲ್ಲ.
ಚುನಾಯಿತ ಸರ್ಕಾರದ ಮುಖ್ಯಮಂತ್ರಿ ಪ್ರಧಾನಿಗಳಿಗೆ ಪತ್ರ ಬರೆದಾಗ ಸ್ವಾಭಾವಿಕವಾಗಿ ಉತ್ತರ ಕೊಡುತ್ತಾರೆ ಎಂಬ ನಂಬಿಕೆ ಇದೆ. ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದು ಮಾಡಲು ಬರೆದ ಮೊದಲ ಪತ್ರಕ್ಕೆ ಉತ್ತರ ಕೊಟ್ಟಿಲ್ಲ. ಎರಡನೇ ಪತ್ರಕ್ಕೆ ಉತ್ತರ ಕೊಡುತ್ತಾರೋ ಇಲ್ಲವೋ ಕಾದು ನೋಡಬೇಕು ಎಂದಿದ್ದಾರೆ.
ಮಾಜಿ ಮುಖ್ಯಮಂತ್ರಿ @hd_kumaraswamy ಅವರ ಅಣ್ಣನ ಮಗ ಅತ್ಯಾಚಾರ ಪ್ರಕರಣದಲ್ಲಿ ಆರೋಪಿ. ಅತ್ಯಾಚಾರದ ವೀಡಿಯೊ ಹರಿದಾಡಿತು ಎನ್ನುವುದಕ್ಕಿಂತ, ಅತ್ಯಾಚಾರ ಘೋರ ಅಪರಾಧ. ಅತ್ಯಾಚಾರದ ಸಂಗತಿಯನ್ನು ದುರ್ಬಲಗೊಳಿಸಲು ಡಿ.ಕೆ. ಶಿವಕುಮಾರ್ ಹಾಗೂ ಮತ್ತೊಬ್ಬರ ಮೇಲೆ ಹೇಳುತ್ತಿದ್ದಾರೆ. ಅವರು ಈ ನೆಲದ ಕಾನೂನಿಗೆ ಗೌರವ ಕೊಡಬೇಕು. ಅಣ್ಣನ ಮಗ ಅಪರಾಧಿಯಲ್ಲ…
— Siddaramaiah (@siddaramaiah) May 24, 2024
ದೇವೇಗೌಡರು ಪ್ರಜ್ವಲ ರೇವಣ್ಣ ಅವರನ್ನು ಕುಟುಂಬದಿಂದ ಹೊರಹಾಕುತ್ತೇವೆ ಎಂದಿದ್ದಾರೆ. ದೇವೇಗೌಡರಿಗೆ ಗೊತ್ತಿಲ್ಲದೆ ಪ್ರಜ್ವಲ್ ವಿದೇಶಕ್ಕೆ ಹೊರಟು ಹೋಗಿದ್ದಾರಾ? HD ಕುಮಾರಸ್ವಾಮಿ ಅವರು ಮೊದಲಿನಿಂದಲೂ ಪ್ರಜ್ವಲ್ ರೇವಣ್ಣ ನಮ್ಮ ಸಂಪರ್ಕದಲ್ಲಿ ಇರಲಿಲ್ಲ ಎಂದು ಈಗ ಹೇಳುತ್ತಿದ್ದಾರೆ. ಚುನಾವಣೆಯಲ್ಲಿ ಪ್ರಜ್ವಲ್ ನನ್ನ ಮಗ, ಅವನಿಗೆ ಮತ ನೀಡಿ ಎಂದು ಪ್ರಚಾರ ಮಾಡಿದ್ದರು. ಇದು ಸಂಪರ್ಕವೋ? ಅಲ್ಲವೋ? ಎಂದು ಪ್ರಶ್ನಿಸಿದ್ದಾರೆ.
ನಮಗೆ ಎಸ್.ಐ.ಟಿ ಬಗ್ಗೆ ಸಂಪೂರ್ಣ ವಿಶ್ವಾಸವಿದೆ. ಕುಮಾರಸ್ವಾಮಿ ಕಾಲದಲ್ಲಿ ಎಷ್ಟು ಪ್ರಕರಣಗಳನ್ನು ಎಸ್ .ಐ.ಟಿ ಗೆ ವಹಿಸಿದ್ದಾರೆ ಎನ್ನುವ ಬಗ್ಗೆ ನನಗೆ ತಿಳಿದಿಲ್ಲ. ಎಸ್.ಐ.ಟಿ ರಚನೆ ಮಾಡುವುದು ಪ್ರಕರಣದ ಬಗ್ಗೆ ಗಮನವನ್ನು ಕೇಂದ್ರೀಕರಿಸಲು, ಸತ್ಯಾಸತ್ಯತೆಗಳನ್ನು ಹೊರತರಲು ಎಂದು ಟ್ವೀಟ್ ನಲ್ಲಿ ತಿರುಗೇಟು ನೀಡಿದ್ದಾರೆ.
ದೇವೇಗೌಡರು ಪ್ರಜ್ವಲ ರೇವಣ್ಣ ಅವರನ್ನು ಕುಟುಂಬದಿಂದ ಹೊರಹಾಕುತ್ತೇವೆ ಎಂದಿದ್ದಾರೆ. ದೇವೇಗೌಡರಿಗೆ ಗೊತ್ತಿಲ್ಲದೆ ಪ್ರಜ್ವಲ್ ವಿದೇಶಕ್ಕೆ ಹೊರಟು ಹೋಗಿದ್ದಾರಾ? @hd_kumaraswamy ಅವರು ಮೊದಲಿನಿಂದಲೂ ಪ್ರಜ್ವಲ್ ರೇವಣ್ಣ ನಮ್ಮ ಸಂಪರ್ಕದಲ್ಲಿ ಇರಲಿಲ್ಲ ಎಂದು ಈಗ ಹೇಳುತ್ತಿದ್ದಾರೆ. ಚುನಾವಣೆಯಲ್ಲಿ ಪ್ರಜ್ವಲ್ ನನ್ನ ಮಗ, ಅವನಿಗೆ ಮತ ನೀಡಿ ಎಂದು…
— Siddaramaiah (@siddaramaiah) May 24, 2024