ಬೆಂಗಳೂರು : ಕಲುಷಿತ ನೀರು ಕುಡಿದು ಅಸ್ವಸ್ಥರಾಗುತ್ತಿರುವ ಪ್ರಕರಣ ಹೆಚ್ಚಳ ಹಿನ್ನೆಲೆ ಬೆಂಗಳೂರಿನಲ್ಲಿ ಮುನ್ನೆಚ್ಚರಿಕೆ ವಹಿಸುವಂತೆ ಬಿಬಿಎಂಪಿ ಮುಖ್ಯ ಆಯುಕ್ತರು, ಜಲಮಂಡಳಿ ಅಧ್ಯಕ್ಷರು ಹಾಗೂ ನಗರ ಜಿ.ಪಂ ಸಿಇಒಗೆ ಡಿಸಿಎಂ ಡಿಕೆ ಶಿವಕುಮಾರ್ ಪತ್ರ ಬರೆದಿದ್ದಾರೆ.
ಹೌದು ಕಲುಷಿತ ನೀರು ಕುಡಿದು ಅಸ್ವಸ್ಥರಾಗಿರುವ ಪ್ರಕರಣ ಹಿನ್ನೆಲೆ ಬೆಂಗಳೂರಿನಲ್ಲಿ ಮುನ್ನೆಚ್ಚರಿಕೆ ವಹಿಸುವಂತೆ ಡಿಕೆ ಶಿವಕುಮಾರ್ ಪತ್ರ ಬರೆದಿದ್ದಾರೆ. ಬಿಬಿಎಂಪಿ ಮುಖ್ಯ ಆಯುಕ್ತರು ಹಾಗೂ ಜಲ ಮಂಡಳಿ ಅಧ್ಯಕ್ಷರು ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ಸಿಇಒ ಗೆ ಡಿಕೆ ಶಿವಕುಮಾರ್ ಪತ್ರ ಬರೆದಿದ್ದಾರೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಲುಷಿತ ನೀರು ಕುಡಿದು ಅಸ್ವಸ್ಥರಾಗಿದ್ದಾರೆ ಕಲುಷಿತ ನೀರು ಕುಡಿದಿದ್ದರಿಂದ ವಿವಿಧ ರೋಗಗಳಿಗೆ ಜನರು ತುತ್ತಾಗುತ್ತಿದ್ದಾರೆ. ಬಗ್ಗೆ ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯ ಸಭೆಯಲ್ಲಿ ಚರ್ಚೆಯಾಗಿದೆ ಎಂದು ಹೇಳಿದ್ದಾರೆ.ಹಾಗಾಗಿ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕಗಳ ಸ್ಥಳಗಳಿಗೆ ಅಧಿಕಾರಿಗಳು ಖುದ್ದು ಭೇಟಿ ನೀಡಬೇಕು.
ನೀರಿನ ಘಟಕಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸುತ್ತಿರುವ ಬಗ್ಗೆ ಖಚಿತ ಪಡಿಸಿಕೊಂಡು, ಸದರಿ ಘಟಕದಿಂದ ಸರಬರಾಜು ಆಗುತ್ತಿರುವ ನೀರನ್ನು ಪ್ರಯೋಗಾಲಯದಲ್ಲಿ ಪರೀಕ್ಷಿಸಿ, ಕುಡಿಯಲು ಯೋಗ್ಯವಿರುವ ನೀರು ಉತ್ತಮ ಗುಣಮಟ್ಟದ್ದು ಎಂಬ ಬಗ್ಗೆ ಖಾತ್ರಿ ಪಡಿಸಿಕೊಳ್ಳಬೇಕು.
ಬಳಿಕ ಸಾರ್ವಜನಿಕರಿಗೆ ಉತ್ತಮ ಗುಣಮಟ್ಟದ ಕುಡಿಯುವ ನೀರನ್ನು ಸರಬರಾಜು ಮಾಡಲು ಹಾಗೂ ಕುಡಿಯುವ ನೀರಿನಿಂದ ಯಾವುದೇ ಆರೋಗ್ಯ ಸಮಸ್ಯೆ ಉಂಟಾಗದಂತೆ ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಿದೆ. ತಪ್ಪಿದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಈ ಮೂಲಕ ತಿಳಿಸಲಾಗಿದೆ.