ಬೆಂಗಳೂರು: ನಗರದಲ್ಲಿ 11 ವರ್ಷಗಳ ಹಿಂದೆ ನಡೆದಿದ್ದಂತ ರೇಪ್ ಅಂಡ್ ಮರ್ಡರ್ ಪ್ರಕರಣವನ್ನು ಸಿಐಡಿ ಪೊಲೀಸರು ಬೇಧಿಸಿದ್ದಾರೆ. ಈ ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಬೆಂಗಳೂರಿನ ಚಿಕ್ಕಜಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಫೆಬ್ರವರಿ 15, 2013ರಲ್ಲಿ ವಿಜಯಾ ಎಂಬುವರನ್ನು ರೇಪ್ ಅಂಡ್ ಮರ್ಡರ್ ಮಾಡಲಾಗಿತ್ತು. ಬ್ಯಾಂಕ್ ಒಂದರಲ್ಲಿ ಕೆಲಸ ಮಾಡುತ್ತಿದ್ದಂತ ವಿಜಯಾ ಅವರ ಮೃತದೇಹ ರೇಪ್ ಅಂಡ ಮರ್ಡರ್ ಆಗಿರುವಂತ ಸ್ಥಿತಿಯಲ್ಲಿ ಚಿಕ್ಕಜಾಲ ಬಳಿಯ ನೀಲಗಿರಿ ತೋಪಿನಲ್ಲಿ ಪತ್ತೆಯಾಗಿತ್ತು.
ಈ ಪ್ರಕರಣ ಸಂಬಂಧ ಅಂದೇ ಪೊಲೀಸರು ವಿಜಯಾ ಜೊತೆಗೆ ಅದೇ ಬ್ಯಾಂಕ್ ನಲ್ಲಿ ಕೆಲಸ ಮಾಡುತ್ತಿದ್ದಂತ ಪತಿ ಬಾಲಕೃಷ್ಣ ಪೈ ಅವರನ್ನು ಬಂಧಿಸಿ, ವಿಚಾರಣೆ ನಡೆಸಿದ್ದರು. ಆಗ ಈ ರೇಪ್ ಅಂಡ್ ಮರ್ಡರ್ ಕೇಸಲ್ಲಿ ಪತಿಯ ಪಾತ್ರವಿಲ್ಲ ಅಂತ ತಿಳಿದು ಬಂದಿತ್ತು. ಹೀಗಾಗಿ ಪೊಲೀಸರು ಕೋರ್ಟ್ ಗೆ ಸಿ-ರಿಪೋರ್ಟ್ ಸಲ್ಲಿಸಿದ್ದರು.
ಆದ್ರೇ ಪೊಲೀಸರ ವರದಿಯನ್ನು ಪ್ರಶ್ನಿಸಿ ಹೈಕೋರ್ಟ್ ಗೆ ವಿಜಯಾ ಪತಿ ಬಾಲಕೃಷ್ಣ ಪೈ ಮೇಲ್ಮನವಿ ಸಲ್ಲಿಸಿದ್ದರು. ಈ ಕೇಸ್ ವಿಚಾರಣೆ ನಡೆಸಿದ್ದಂತ ನ್ಯಾಯಾಲಯವು, ಸಿಐಡಿಗೆ ವಿಸ್ತೃತ ತನಿಖೆಯ ವರದಿ ಸಲ್ಲಿಸುವಂತೆ ಆದೇಶಿಸಿತ್ತು.
ಈ ಪ್ರಕರಣದ ತನಿಖೆ ನಡೆಸಿದಂತ ಸಿಐಡಿ ಪೊಲೀಸರು, ಆರಂಭದಲ್ಲಿ ದೀಪಕ್ ಕೈವಾಡವಿದೆ ಎಂಬುದನ್ನು ಪತ್ತೆ ಹಚ್ಚಿತ್ತು. ಆತನನ್ನು ವಶಕ್ಕೆ ಪಡೆದು ತನಿಖೆ ನಡೆಸಿದಾಗ ಬ್ಯಾಂಕ್ ಮ್ಯಾನೇಜರ್ ನರಸಿಂಹಮೂರ್ತಿ ಹಾಗೂ ಅವರ ಸಹಚರ ಹರಿಪ್ರಸಾದ್ ಕೈವಾಡ ಬೆಳಕಿಗೆ ಬಂದಿತ್ತು. ಇಬ್ಬರನ್ನು ತೀವ್ರ ವಿಚಾರಣೆಗೆ ಒಳಪಡಿಸಿದಾಗ 11 ವರ್ಷಗಳ ಬಳಿಕ ವಿಜಯಾ ರೇಪ್ ಅಂಡ್ ಮರ್ಡರ್ ಮಾಡಿದ್ದು ಅದೇ ಬ್ಯಾಂಕ್ ಉದ್ಯೋಗಿಗಳು ಎಂಬುದು ತಿಳಿದು ಬಂದಿದೆ. ಈಗ ಸಿಐಡಿ ಪೊಲೀಸರು ಮೂವರನ್ನು ಬಂಧಿಸಿ, ಜೈಲಿಗಟ್ಟಿದ್ದಾರೆ.
BREAKING: ‘BBMP ಮುಖ್ಯ ಆಯುಕ್ತ’ರ ಹೆಸರಲ್ಲಿ ‘ಮೆಸೇಜ್’: ‘FIR’ ದಾಖಲು
2024-25 ನೇ ಸಾಲಿನ ಶೈಕ್ಷಣಿಕ ಮಾರ್ಗದರ್ಶಿ ಪುಸ್ತಕ : ಶಾಲಾ ಮುಖ್ಯಸ್ತರಿಗೆ ಶಿಕ್ಷಣ ಇಲಾಖೆಯಿಂದ ಮಹತ್ವದ ಸೂಚನೆ