ಹಾಸನ : ಮಹಿಳೆಯ ಮೇಲೆ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಿಜೆಪಿ ಮುಖಂಡ ಹಾಗೂ ವಕೀಲ ದೇವರಾಜ ಗೌಡ ನ್ಯಾಯಾಂಗ ಬಂಧನ ಅವಧಿಯನ್ನು ಜೂನ್ 7 ರವರೆಗೆ ವಿಸ್ತರಿಸಿ ಹಾಸನ 2ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ.
ಬಿಜೆಪಿ ಮುಖಂಡ ದೇವರಾಜೆಗೌಡ ವಿರುದ್ಧ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ದೇವರಾಜೇಗೌಡ ನ್ಯಾಯಾಂಗ ಬಂಧನ ವಿಸ್ತರಿಸಿ ಇದೀಗ ಕೋಟ್ ಆದೇಶ ಹೊರಡಿಸಿದೆ. ಆರೋಪಿ ದೇವರಾಜಗೌಡಗೆ ಜೂನ್ 7 ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ.
ಹಾಸನ ಎರಡನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಈ ಆದೇಶ ಹೊರಡಿಸಿದೆ. 14 ದಿನ ನ್ಯಾಯಾಂಗ ಬಂಧನ ಒಪ್ಪಿಸಿ ನ್ಯಾಯಾಲಯ ಆದೇಶ ನೀಡಿದೆ ಎಂದು ತಿಳಿದುಬಂದಿದೆ.ಮೇ 28ರಂದು ದೇವರಾಜೇಗೌಡ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ.