ರಾಯಚೂರು : ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ವೇಳೆ ಹಣಕ್ಕೆ ಬೇಡಿಕೆ ಇಟ್ಟ ಆರೋಪದ ಹಿನ್ನೆಲೆಯಲ್ಲಿ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಗಬ್ಬೂರು ಠಾಣೆಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪಿಎಸ್ಐ ಹಾಗೂ ಕಾನ್ಸ್ಟೇಬಲ್ ಅನ್ನು ಬಂಧಿಸಿದ್ದಾರೆ.
ಹೌದು ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಗಬ್ಬುರು ಠಾಣೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಐಪಿಎಲ್ ಬೆಟ್ಟಿಂಗ್ ಆರೋಪ ವಿಚಾರವಾಗಿ ಹಣಕ್ಕೆ ಬೇಡಿಕೆ ಇಟ್ಟಿರುವ ಆರೋಪ ಕೇಳಿ ಬಂದಿದೆ. ಫಾರೂಕ್ ಎಂಬಾತನ ಬಳಿ ಪಿಎಸ್ಐ ಮಂಜುನಾಥ್ 3 ಲಕ್ಷ್ಮ ಹಣಕ್ಕೆ ಬೇಡಿಕೆ ಇಟ್ಟ ಆರೋಪ ಕೇಳಿ ಬಂದಿದೆ.
ಈ ಬಗ್ಗೆ ಪಿಎಸ್ಐ ಮಂಜುನಾಥ ವಿರುದ್ಧ ಲೋಕಾಯುಕ್ತಕ್ಕೆ ಫಾರೂಖ್ ದೂರು ಸಲ್ಲಿಸಿದ್ದ. ಫಾರೂಕ್ ದೂರಿನ ಮೇರೆಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿ ವೇಳೆ ಕಾನ್ಸ್ಟೇಬಲ್ ರಮೇಶ್ ಐವತ್ತು ಸಾವಿರ ಹಣ ಪಡೆಯುವಾಗ ಲೋಕಾಯುಕ್ತ ಬೆಲೆಗೆ ಬಿದ್ದಿದ್ದಾನೆ. ವಿಚಾರಣೆ ವೇಳೆ ಪಿಎಸ್ಐ ಮಂಜುನಾಥ ವಿರುದ್ಧ ಆರೋಪ ಕೇಳಿ ಬಂದಿದೆ. ಪ್ರಕರಣ ಸಂಬಂಧಪಟ್ಟ ಪೊಲೀಸರು ಠಾಣೆ ಪಿಎಸ್ಐ ಮಂಜುನಾಥ್ ಹಾಗೂ ಕಾನ್ಸ್ಟೇಬಲ್ ರಮೇಶ್ ನನ್ನು ಬಂಧಿಸಲಾಗಿದೆ.