ರಾಯಚೂರು : ರಾಯಚೂರಿನಲ್ಲಿ ಬೆಳ್ಳಂಬೆಳಗ್ಗೆ ಘೋರ ದುರಂತವೊಂದು ಸಂಭವಿಸಿದ್ದು, ಅರೆಬರೆ ವಿದ್ಯುತ್ ಕಾಮಗಾರಿಗೆ 2 ವರ್ಷದ ಕಂದಮ್ಮ ಬಲಿಯಾಗಿರುವ ಘಟನೆ ನಡೆದಿದೆ.
ರಾಯಚೂರು ಜಿಲ್ಲೆಯ ಲಿಂಗಸೂಗುರು ತಾಲೂಕಿನ ದೇವರಭೂಪುರ ಗ್ರಾಮದಲ್ಲಿ ಅರೆಬರೆ ವಿದ್ಯುತ್ ಕಾಮಗಾರಿಯಿಂದ ವಿದ್ಯುತ್ ಶಾಕ್ ನಿಂದ ಎರಡು ವರ್ಷದ ಮಗು ಮೃತಪಟ್ಟಿದೆ.
ಬೋರ್ ವೆಲ್ ಬಳಿ ಗ್ರಾಮಪಂಚಾಯಿತಿ ಸಿಬ್ಬಂದಿಗಳು ಅರೆಬರೆ ವಿದ್ಯುತ್ ಕಾಮಗಾರಿ ನಡೆಸಿದ್ದರು. ಈ ವೇಳೆ ಆಟವಾಡುತ್ತಿದ್ದ ಮಗು ವಿದ್ಯುತ್ ಶಾಕ್ ನಿಂದ ಮೃತಪಟ್ಟಿದೆ ಎಂದು ಪೋಷಕರು ಆರೋಪಿಸಿದ್ದಾರೆ. ಘಟನೆ ಸಂಬಂಧ ಗ್ರಾಮ ಪಂಚಾಯಿತಿ ಪಿಡಿಒ, ಸಿಬ್ಬಂದಿಗಳನ್ನು ಅಮಾನತು ಮಾಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.