ಬೆಂಗಳೂರು : ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಸಮೀಪದ ಜಿ.ಆರ್. ಪಾರ್ಮ್ ಹೌಸ್ ನಲ್ಲಿ ನಡೆದಿದ್ದ ರೇವ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲುಗು ನಟಿ ಹೇಮಾ ಸೇರಿ 8 ಮಂದಿಗೆ ಸಿಸಿಬಿ ಪೊಲೀಸರು ನೋಟಿಸ್ ನೀಡಿದ್ದಾರೆ.
ಮೇ.27 ರಂದು ಸಿಸಿಬಿ ತನಿಖಾಧಿಕಾರಿ ಎದುರು ವಿಚಾರಣೆಗೆ ಹಾಜರಾಗುವಂತೆ ತೆಲುಗು ನಟಿ ಹೇಮಾಗೆ ಸಿಸಿಬಿ ಪೊಲೀಸರು ನೋಟಿಸ್ ನೀಡಿದ್ದಾರೆ.
ಲೆಕ್ಟ್ರಾನಿಕ್ ಸಿಟಿ ಬಳಿಯ ಜಿ.ಆರ್.ಪಾರ್ಮ್ ಹೌಸ್ ನಲ್ಲಿ ನಡೆದಿದ್ದ ರೇವ್ ಪಾರ್ಟಿಯಲ್ಲಿ ನಟ-ನಟಿಯರು ಸೇರಿದಂತೆ ಹಲವರು ಭಾಗಿಯಾಗಿದ್ದರು. ಬಳಿಕ ಸಿಸಿಬಿ ಪೊಲೀಸರು ಅವರನ್ನು ವಶಕ್ಕೆ ಪಡೆದು ರಕ್ತಪರೀಕ್ಷೆ ನಡೆಸಿದ್ದು, ಈ ವೇಳೆ ನಟಿ ಹೇಮಾ ಸೇರಿದಂತೆ ಹಲವರು ಡ್ರಗ್ಸ್ ಸೇವಿಸಿರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ನೋಟಿಸ್ ನೀಡಿದೆ.