ಮಂಗಳೂರು : ಠಾಣೆಯಲ್ಲಿ ಪ್ರತಿಭಟನೆ ನಡೆಸಿದ್ದಲ್ಲದೆ ಪಿಎಸ್ಐ ಅಧಿಕಾರಿಗೆ ಧಮ್ಕಿ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮಂಗಳೂರು ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿ ಎಂಎಲ್ಎ ಅಂತ ಬಿಟ್ಟು ಬಿಡೋಕೆ ಆಗುತ್ತಾ ಎಂದು ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ವಾಗ್ದಾಳಿ ನಡೆಸಿದರು.
ಮಂಗಳೂರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಠಾಣೆಯಲ್ಲಿ ಪ್ರತಿಭಟನೆ ನಡೆದಪೊಲೀಸರಿಗೆ ಧಮ್ಕಿ ಹಾಕಿದ ಪ್ರಕರಣಕೆ ಸಂಬಂಧಿಸಿದಂತೆ ಶಾಸಕ ಹರೀಶ್ ಪೂಂಜಾ ವಿರುದ್ಧ ಎರಡು ಎಫ್ಐಆರ್ ದಾಖಲಾಗಿದೆ. ಪೂಂಜಾ ಪ್ರಕರಣದಲ್ಲಿ ಕಾಂಗ್ರೆಸ್ನ ಒತ್ತಡ ಅಂದರೆ ಏನು ಅರ್ಥ? ಕಾನೂನು ಎಲ್ಲರಿಗೂ ಒಂದೇ ಅಲ್ವಾ?
ಇದು ಜಾಮೀನು ಪ್ರಕರಣ ಅಲ್ಲ ಈ ಕೆ ಎಸ್ ನಲ್ಲಿ ಏಳು ವರ್ಷ ಜೈಲು ಶಿಕ್ಷೆ ಇರುತ್ತದೆ ಎಂಎಲ್ಎ ಅಂತ ಬಿಟ್ಟುಬಿಡುವುದಕ್ಕೆ ಆಗುತ್ತಾ ಎಂದು ಮಂಗಳೂರು ವಿಮಾನ ನಿಲ್ದಾಣದಲ್ಲಿ ಶಾಸಕ ಹರೀಶ್ ಪೂಂಜ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.