ಮಂಗಳೂರು : ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ತುಂಬಿದ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಧರ್ಮಸ್ಥಳದ ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ಈ ವೇಳೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾತನಾಡಿ ಶಕ್ತಿ ಯೋಜನೆಯಿಂದ ಧರ್ಮಸ್ಥಳಕ್ಕೆ ಸಾವಿರಾರು ಜನರು ಬಂದಿದ್ದಾರೆ ಎಂದು ಹೇಳಿದರು.
ಮಂಜುನಾಥನ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಾನು ಹಾಗೂ ಸಿಎಂ ಸಿದ್ದರಾಮಯ್ಯನವರು ಮಂಜುನಾಥನ ದರ್ಶನ ಪಡೆದಿದ್ದೇವೆ. ಸಿಎಂ ಒಳ್ಳೆಯ ಮಳೆ ಬೆಳೆಯಾಗಲಿ ಅಂತ ಪ್ರಾರ್ಥನೆ ಮಾಡಿದ್ದಾರೆ. ನಮ್ಮ ಧರ್ಮದ ಸಂಪ್ರದಾಯದಂತೆ ಬಂದು ದರ್ಶನ ಮಾಡಿದ್ದೇವೆ. ಜನತೆಯ ಪರವಾಗಿ ಹಾಗೂ ವೈಯಕ್ತಿಕ ಪ್ರಾರ್ಥನೆ ಮಾಡಿದ್ದೇವೆ ಎಂದು ತಿಳಿಸಿದರು.
ಶಕ್ತಿ ಯೋಜನೆಯಿಂದ ಧರ್ಮಸ್ಥಳಕ್ಕೆ ಸಾವಿರಾರು ಜನ ಬಂದಿದ್ದಾರೆ. ಈಗಲೂ ಸಿಎಂ ಸಿದ್ದರಾಮಯ್ಯ ನನ್ನ ಬಳಿ ಸಂತೋಷ ವ್ಯಕ್ತಪಡಿಸಿದರು. ದೇಗುಲದ ಒಳಗೆ ಮಹಿಳೆಯರು 2000 ಸಿಗುತ್ತಿದೆ ಅಂತ ಹೇಳಿದರು. ಅವರೆಲ್ಲರ ಆಶೀರ್ವಾದ ನಮಗೆ ಶಕ್ತಿ ತುಂಬಿದೆ. ಎಂದು ಧರ್ಮಸ್ಥಳದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು.