ಗುಜರಾತ್ : ಇಂದು ಸಂಜೆ ಗುಜರಾತ್‌ನ ರಾಜ್‌ಕೋಟ್‌ನಲ್ಲಿ ಗೇಮಿಂಗ್ ಝೋನ್‌ನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು ಘಟನೆಯಲ್ಲಿ 24 ಜನರು ಸಜೀವ ದಹನಗೊಂಡಿದ್ದು ಇನ್ನು ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ ಎಂದು ಎಎನ್ಐ ವರದಿ ಮಾಡಿದೆ.
ಘಟನಾ ಸ್ಥಳಕ್ಕೆ ಹಲವು ಅಗ್ನಿಶಾಮಕ ಟೆಂಡರ್ ಧಾವಿಸಿದ್ದು, ಬೆಂಕಿ ನಂದಿಸುವ ಪ್ರಯತ್ನ ಮುಂದುವರಿದಿದೆ. ಬೆಂಕಿ ಅವಘಡಕ್ಕೆ ಇನ್ನೂ ಕಾರಣ ತಿಳಿದುಬಂದಿಲ್ಲ. ಬೆಂಕಿ ಅನಾಹುತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ. ಬೆಂಕಿ ನಂದಿಸುವ ಪ್ರಯತ್ನ ನಡೆಯುತ್ತಿದೆ.
ನಾಪತ್ತೆಯಾದವರ ಬಗ್ಗೆ ನಮಗೆ ಯಾವುದೇ ಸಂದೇಶ ಬಂದಿಲ್ಲ. ತಾತ್ಕಾಲಿಕ ಕಟ್ಟಡ ಕುಸಿದಿರುವುದರಿಂದ ಮತ್ತು ಗಾಳಿಯ ವೇಗದಿಂದಾಗಿ ನಾವು ಅಗ್ನಿಶಾಮಕ ಕಾರ್ಯಾಚರಣೆಯಲ್ಲಿ ತೊಂದರೆ ಎದುರಿಸುತ್ತಿದ್ದೇವೆ ಎಂದು ಅಗ್ನಿಶಾಮಕ ಅಧಿಕಾರಿ ಹೇಳಿರುವುದಾಗಿ ಎಎನ್ಐ ವರದಿ ಮಾಡಿದೆ.
ಘಟನೆಯಲ್ಲಿ ಹಲವರಿಗೆ ಗಂಭೀರ ಗಾಯಗಳಾಗಿದ್ದು, ತಕ್ಷಣ ಅವರನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಇನ್ನು ಹಲವರು ಸಿಲುಕಿರುವ ಮಾಹಿತಿ ಇದೆ ಈವರೆಗೂ 24 ಶವಗಳನ್ನು ಅಗ್ನಿ ಶಾಮಕ ದಳದ ಸಿಬ್ಬಂದಿ ಹೊರ ತೆಗೆದಿದ್ದಾರೆ. ದುರಂತದಲ್ಲಿ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಎಎನ್ಐ ವರದಿ ಮಾಡಿದೆ.
#WATCH Rajkot, Gujarat: On fire incident at TRP game zone, Fire Station Officer RA Joban says, " We cannot say anything about the exact number… We are bringing down bodies from both sides… The search operation is underway…" pic.twitter.com/SRdFAzlfCn
— ANI (@ANI) May 25, 2024