ಬೆಂಗಳೂರು : ರಾಜ್ಯ ಸರ್ಕಾರ ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ಬಿಗ್ ಶಾಕ್ ನೀಡಿದ್ದು, ಕಳೆ ಮೂರು ತಿಂಗಳಿನಿಂದ ಅನ್ನಭಾಗ್ಯ ಐದು ಕೆಜಿ ಅಕ್ಕಿ ಹಣ ಫಲಾನುಭವಿಗಳ ಖಾತೆಗೆ ಜಮಾ ಆಗಿಲ್ಲ.
ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ 5 ಕೆಜಿ ಅಕ್ಕಿ ಬದಲಿಗೆ ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಡಿಬಿಟಿ ಮೂಲಕ ಸಂದಾಯ ಮಾಡುತ್ತಿದ್ದ ಹಣ ಕಳೆದ ಮೂರು ತಿಂಗಳಿನಿಂದ ತಾಂತ್ರಿಕ ದೋಷದ ಕಾರಣ ಜಮೆ ಆಗಿಲ್ಲ.
ಅನ್ನಭಾಗ್ಯ ಯೋಜನೆಯಡಿ ಅಂತ್ಯೋದಯ ಮತ್ತು ಬಿಪಿಎಲ್ ಕುಟಂಬಗಳ ಪಡಿತರ ಚೀಟಿದಾರರ ಕುಟುಂಬಗಳ ನಾಲ್ಕು ಕೋಟಿಗೂ ಹೆಚ್ಚು ಫಲಾನುಭವಿಗಳಿಗೆ ಪ್ರತಿತಿಂಗಳು 5 ಕೆಜಿ ಹೆಚ್ಚುವರಿಗೆ ಅಕ್ಕಿಗೆ 660 ಕೋಟಿ ರೂ. ಮಾಡಲಾಗುತ್ತದೆ. ಆದರೆ ಮಾರ್ಚ್, ಏಪ್ರಿಲ್ ಹಾಗೂ ಮೇ ತಿಂಗಳಿನಲ್ಲಿ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆಯಾಗಿಲ್ಲ ಎಂದು ಗ್ರಾಹಕರು ದೂರಿದ್ದಾರೆ.