ಹಾಸನ : ಹಾಸನದಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮಗು ಸೇರಿ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಹಾಸನದ ಹೊರ ವಲಯ ಈಚನಹಳ್ಳಿಯಲ್ಲಿ ಟ್ರಕ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಮಗು ಸೇರಿ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಟ್ರಕ್ ಡಿಕ್ಕಿಯಾದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ. ಅಪಘಾತದಲ್ಲಿ ಮೂವರು ಮಹಿಳೆಯರು, ಇಬ್ಬರು ಪುರುಷರು ಸೇರಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶವಗಳನ್ನು ಹೊರತೆಗೆಯಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.