ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ಸಮೀಪದ ಜಿ.ಆರ್.ಫಾರ್ಮ್ ಹೌಸ್ನಲ್ಲಿ ನಡೆದ ರೇವ್ ಪಾರ್ಟಿ ಪ್ರಕರಣದ ತನಿಖೆ ನಡೆಸುತ್ತಿರುವ ಸಿಸಿಬಿ ಪೊಲೀಸರು ಈಗಾಗಲೇ ವಿಚಾರಣೆಗೆ ಹಾಜರಾಗುವಂತೆ ಹಲವರಿಗೆ ನೋಟಿಸ್ ನೀಡಿದೆ.
ರೇವ್ ಪಾರ್ಟಿ ಪ್ರಕರಣದ ತನಿಖೆ ನಡೆಸುತ್ತಿರುವ ಸಿಸಿಬಿಗೆ ಮತ್ತೊಷ್ಟು ಸ್ಪೋಟಕ ಸಂಗತಿಗಳ ಮಾಹಿತಿ ಸಿಕ್ಕಿದ್ದು, ರೇವ್ ಪಾರ್ಟಿಯಲ್ಲಿ ಕೇವಲ ಡ್ರಗ್ಸ್ ದಂಧೆ ಮಾತ್ರವಲ್ಲ, ಬೆಟ್ಟಿಂಗ್ ಹಾಗೂ ಸೆಕ್ಸ್ ದಂಧೆಯೂ ನಡೆದಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಜೊತೆಗೆ ಹಲವರು ರೇವ್ ಪಾರ್ಟಿಯಲಿ ಬೆಟ್ಟಿಂಗ್ ನಲ್ಲಿ ಭಾಗಿಯಾಗಿದ್ದರು ಎಂದು ತಿಳಿದುಬಂದಿದೆ.
ಪಾರ್ಟಿಯಲ್ಲಿ ಡ್ರಗ್ಸ್ ಸೇವನೆ ದೃಧಿಢಪಟ್ಟಿರುವ ಹಿನ್ನೆಲೆಯಲ್ಲಿ ನಟಿ ಹೇಮಾ ಸೇರಿದಂತೆ 86 ಮಂದಿಗೆ ನೋಟಿಸ್ ನೀಡಿ ವಿಚಾರಣೆ ನಡೆಸಲು ತೀರ್ಮಾನಿಸಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ ಎಂದು ಮೂಲಗಳು ಹೇಳಿವೆ.