ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಭರ್ಜರಿಯಾಗಿ ಅಬ್ಬರಿಸುತ್ತಿದ್ದು, ನಡುವೆ ಮೇ 31ಕ್ಕೆ ರಾಜ್ಯಕ್ಕೆ ಮುಂಗಾರು (Mansoon Rain) ಪ್ರವೇಶ ಮಾಡಲಿದೆ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಇದೇ ಮೇ 31ರಂದು ನೈರುತ್ಯ ಮುಂಗಾರು ಮಳೆ ಕೇರಳದ ಮೂಲಕ ರಾಜ್ಯ ಪ್ರವೇಶ ಮಾಡಲಿದ್ದು, ಅಂದೇ ರಾಜ್ಯದಲ್ಲಿ ಕರಾವಳಿ ಭಾಗದ ಮೂಲಕ ರಾಜ್ಯದ ಇತರೆ ಭಾಗಗಳಿಗೆ ಮಳೆಯಾಗಲಿದೆ ಅಂಥ ತಿಳಿಸಿದೆ. ಈ ಮೂಲಕ ಕಳೆದ ನಾಲ್ಕು ತಿಂಗಳಿನಿಂದ ಬೇಸಿಗೆಯಿಂದ ಬಳಲುತ್ತಿದ್ದ ಜನತೆಗೆ ಬಿಗ್ ರಿಲಿಫ್ ಸಿಕ್ಕಿದೆ.
ಕೊಡಗು, ಮೈಸೂರು, ಮಂಡ್ಯ ಮತ್ತು ಚಿತ್ರದುರ್ಗದಲ್ಲಿ ಮುಂದಿನ ವಾರದಲ್ಲಿ ಸಾಧಾರಣದಿಂದ ಭಾರಿ ಮಳೆಯಾಗಲಿದ್ದು, ನೈಋತ್ಯ ಮಾರುತಗಳು ಜೂನ್ 5 ರೊಳಗೆ ಕರ್ನಾಟಕಕ್ಕೆ ಮುಂಗಾರು ಪ್ರವೇಶಿಸಲಿವೆ ಎಂದು ತಿಳಿಸಿದೆ.