ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯ ಅಬ್ಬರ ಮುಂದುವರೆದಿದ್ದು, ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸಂಬಂಧಿ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ.
ರಾಜ್ಯದಲ್ಲಿ ಭಾನುವಾರ ಭಾರೀ ಮಳೆಯಾಗಿದ್ದು, ಕಲಬುರಗಿ ಜಿಲ್ಲೆಯಲ್ಲಿ ಸಿಡಿಲಿಗೆ ಮೂವರು ಮೃತಪಟ್ಟಿದ್ದಾರೆ. ಸೇಡಂ ತಾಲೂಕಿನ ವೆಂಕಟಾಪುರ ಗ್ರಾಮದಲ್ಲಿ ಮೋಹನ್ ನಾಯಕ್ (68) ಎಂಬುವರು ಹೊಲದಲ್ಲಿ ಕೆಲಸ ಮಾಡುವಾಗ ಸಿಡಿಲು ಬಡಿದು ಮೃತಪಟ್ಟಿದ್ದಾರೆ. ಚಿತ್ತಾಪುರ ತಾಲೂಕಿನ ವಾಡಿಯಲ್ಲಿ ಸತೀಶ ಪ್ರಹ್ಲಾದ್ ಶಳಕೆ (43) ಹಾಗೂ ದೊಂಡಿರಾಮ ಏಕನಾಥ ವಾಗಮೊರೆ (50) ಎಂಭವುರು ಸಾವನ್ನಪ್ಪಿದ್ದಾರೆ. ಗುರುಮಠಕಲ್ ಪಟ್ಟಣದ ಚಪೇಟ್ಲಾದಲ್ಲಿ ಮನೆಯ ಪತ್ರಾಸ್ ಮೇಲೆ ಇಟ್ಟಿದ್ದ ಕಲ್ಲು ಬಿದ್ದು ನಾಲ್ಕು ವರ್ಷದ ಬಾಲಕಿ ಮನಸ್ವಿ ಯಾದವ್ ಎಂಬಾಕೆ ಮೃತಪಟ್ಟಿದ್ದಾಳೆ.
ಕಲಬುರಗಿ, ಯಾದಗಿರಿ, ವಿಜಯಪುರ, ಕೊಪ್ಪಳ ಸೇರಿ ಎಂಟು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.