ಚಿತ್ರದುರ್ಗ: ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತ, ಸಕ್ರಿಯ ಮುಖಂಡರಾದಂತ ಸಿ.ಶಿವು ಯಾದವ್ ಗೆ ಕಾಂಗ್ರೆಸ್ ಪಕ್ಷದಿಂದ ಎಂ.ಎಲ್.ಸಿ ಸ್ಥಾನ ನೀಡುವಂತೆ ಕಾಡುಗೊಲ್ಲ ಮುಖಂಡರು ಆಗ್ರಹಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಕರ್ನಾಟಕ ರಾಜ್ಯ ಕಾಡುಗೊಲ್ಲ ಕಾರ್ಯಾಧ್ಯಕ್ಷರಾದಂತ ತಿಮ್ಮಯ್ಯ ಕೆ ಮ್ಯಾಕ್ಲೂರಹಳ್ಳಿ ಅವರು,
ಶ್ರೀ ಸಿ ಶಿವು ಯಾದವ್ ಪ್ರಗತಿಪರ ಚಿಂತಕರು ಹಾಗೂ ಹಿರಿಯ ಕಾಂಗ್ರೆಸ್ ಮುಖಂಡರಾಗಿರುತ್ತಾರೆ. ಸುಮಾರು 35 ವರ್ಷಗಳಿಂದಲೂ ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಸಮಿತಿಯಲ್ಲಿ ಪದಾಧಿಕಾರಿಗಳಾಗಿ ಪಕ್ಷ ಸಂಘಟನೆ ಮಾಡಿರುತ್ತಾರೆ. ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಯಧ್ಯಕ್ಷರಾಗಿ ಸಹಾ ಕಾರ್ಯನಿರ್ವಾಹಿಸಿರುತ್ತಾರೆ. ಅವರು ಕರ್ನಾಟಕ ರಾಜ್ಯ ಕಾಡುಗೊಲ್ಲ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷರಾಗಿ ರಾಜ್ಯದಲ್ಲಿ ಕಾಡುಗೊಲ್ಲ ಜನಾಂಗದಲ್ಲಿ ಸಕ್ರಿಯಾವಾಗಿ ತೊಡಗಿಸಿಕೊಂಡು ಮುಂಚೂಣಿಯಲ್ಲಿರುತ್ತಾರೆ ಎಂದಿದ್ದಾರೆ.
ಚಿತ್ರದುರ್ಗ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾಗಿ ಉಪಾದ್ಯಕ್ಷರಾಗಿ ಪ್ರಧಾನ ಕಾರ್ಯದರ್ಶಿಗಳಾಗಿ ಜಿಲ್ಲಾ ವಕೀಲರ ಸಂಘವನ್ನು ಯಶಸ್ವಿಯಾಗಿ ಮುನ್ನಡೆಸಿದ್ದಾರೆ. ಸಿ ಶಿವು ಯಾದವ್ ಅವರು 2013, 2018 ಹಾಗೂ 2023ರಿಂದ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಬಿ.ಫಾರಂ ವಂಚಿತರಾಗಿರುತ್ತಾರೆ. ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಮುಂದಿನ ದಿನಗಳಲ್ಲಿ ಪಕ್ಷದಲ್ಲಿ ಒಳ್ಳೆಯ ಸ್ಥಾನಮಾನ ನೀಡುವ ಭರವಸೆಯನ್ನು ಸಾಕಷ್ಟು ಭಾರಿ ನೀಡುರತ್ತಾರೆ. ಆದರೂ ಸಹ ಯಾವುದೇ ಭರವಸೆಯನ್ನು ಈಡೇರಿಸಿಲ್ಲ ಎಂದು ವಾಗ್ದಾಳಿ ನಡೆಸಿದರು.
ಸಕ್ರಿಯವಾಗಿ ನಮ್ಮಂತಹ ಅಸಹಾಯಕ ಮತ್ತು ಚಿಕ್ಕ ಪುಟ್ಟ ಸಮುದಾಯಗಳಿಗೆ ಬೇಕಾಗಿರುವ ಸವಲತ್ತುಗಳನ್ನು ಕೊಡಿಸಲು ವಿಧಾನ ಸೌಧದಲ್ಲಿ ಗಟ್ಟಿಧ್ವನಿಯಾಗಿ ನಿಲ್ಲುವ ಸಮರ್ಥ ನಾಯಕತ್ವ ಇರುವ ಸಿ ಶಿವು ಯಾದವ್ ಅವರನ್ನು ವಿಧಾನ ಪರಿಷತ್ ಶಾಸಕರನ್ನಾಗಿ ಆಯ್ಕೆ ಮಾಡಿಕೊಡಬೇಕೆಂದು ಕರ್ನಾಟಕ ರಾಜ್ಯದ ಎಲ್ಲಾ ಕಾಡುಗೊಲ್ಲ ಸಮುದಾಯದ ಪರವಾಗಿ ವಿನಯಪೂರ್ವಕವಾಗಿ ಮನವಿ ಮಾಡಿದ್ದಾರೆ.