*ರಂಜಿತ್
ಬೆಂಗಳೂರು: ಕಲುಷಿತ ನೀರು ಸೇವನೆ ತಡೆಯಲು ರಾಜ್ಯ ಸರ್ಕಾರದಿಂದ ಮಹತ್ವದ ಸೂಚನೆ ನೀಡಿದ್ದು, ಗ್ರಾಮೀಣಾಭಿವೃದ್ದಿ ಇಲಾಖೆಯು ಕೆಲವು ಮಹತ್ವದ ಸಲಹೆಯನ್ನು ನೀಡಿದೆ.
ರಾಜ್ಯದ ಗ್ರಾಮೀಣ ಜನವಸತಿ ಪ್ರದೇಶಗಳಲ್ಲಿ ಕಲುಷಿತ ನೀರು ಸೇವನೆಯಿಂದ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿದ್ದು, ಇದನ್ನು ತಡೆಯುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಲು ಸರ್ಕಾರ ಪ್ರಮಾಣಿತ ಕಾರ್ಯಾಚರಣೆ ವಿಧಾನವನ್ನು ಪ್ರಕಟಿಸಿದೆ. ಗ್ರಾಮೀಣ ಪ್ರದೇಶದಲ್ಲಿ ವಾಸಿಸುವ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿರುವ ಪ್ರಕರಣಗಳು ಪುನರಾವರ್ತನೆಯಾಗುತ್ತಿವೆ. ಆದ್ದರಿಂದ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವುದು ಅತ್ಯವಶ್ಯಕವಾಗಿದ್ದು, ಈ ಸಂಬಂಧವಾಗಿ ತೆಗೆದುಕೊಳ್ಳಬೇಕಾದ ಕ್ರಮಗಳನ್ನು ಎಸ್‌ಒಪಿಯಲ್ಲಿ ವಿವರಿಸಲಾಗಿದ್ದು, ಕಟ್ಟುನಿಟ್ಟಾಗಿ ಸದರಿ ಕ್ರಮಗಳನ್ನು ಅನುಷ್ಠಾನಗೊಳಿಸಲು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಮತ್ತು ನೀರು ಸರಬರಾಜು ವ್ಯವಸ್ಥೆಯಡಿಯಲ್ಲಿ ಬರುವ ಎಲ್ಲ ಇಲಾಖೆಯ ಅಧಿಕಾರಿಗಳಿಗೆ ಗ್ರಾಮೀಣಾಭಿವೃದ್ಧಿ ಇಲಾಖೆ ಸೂಚನೆ ನೀಡಿದೆ.