ದಾವಣಗೆರೆ : ಚನ್ನಗಿರಿ ಲಾಕಪ್ ಡೆತ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಝ್ಯ ಸರ್ಕಾರವು ಮೂವರು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.
ಲಾಕಪ್ ಡೆತ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿವೈ ಎಸ್ಪಿ ಪ್ರಶಾಂತ್ ಮುನ್ನೋಳ್ಳಿ, ಇನ್ಸಪೆಕ್ಟರ್ ಬಿ. ನಿರಂಜನ್, ಎಸ್. ಐ ಅಕ್ತರ್ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.
ಚನ್ನಗಿರಿಯಲ್ಲಿ ಆದಿಲ್ ಎಂಬ ವ್ಯಕ್ತಿಯನ್ನು ಪೊಲೀಸರು ವಿಚಾರಣೆಗೆ ಪೊಲೀಸ್ ಠಾಣೆಗೆ ಕರೆದುಕೊಂಡ ಸಂದರ್ಭದಲ್ಲಿ ಕುಸಿದು ಬದ್ದು ಮೃತಪಟ್ಟಿದ್ದರು. ಈ ಹಿನ್ನೆಲೆಯಲ್ಲಿ ಕುಟುಂಬಸ್ಥರು ಇದು ಲಾಕಪ್ ಡೆತ್ ಎಂದು ಆರೋಪಿಸಿದ್ದರು. ಬಳಿಕ ಸ್ಥಳೀಯರು ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಈ ವೇಳೆ ಹಲವು ಪೊಲೀಸರು ಗಾಯಗೊಂಡಿದ್ದರು.