ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿಗಳಿಕೆ ಕೇಸ್ ಗೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ಸಮ್ಮತಿಯನ್ನು ಹಿಂಪಡೆದ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಸಿಬಿಐ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆಯನ್ನು ಹೈ ಕೋರ್ಟ್ ಮೇ 31ಕ್ಕೆ ಮುಂದೂಡಿತು.
ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ರಿಟ್ ಅರ್ಜಿ ವಿಚಾರಣೆ ನಡೆಯುತ್ತಿದ್ದು ಸಿ.ಬಿ.ಐ ತನಿಖೆಗೆ ಸಮ್ಮತಿ ಹಿಂಪಡೆದ ಸರಕಾರದ ಕ್ರಮ ಪ್ರಶ್ನಿಸಿ ರಿಟ್ ಅರ್ಜಿ ಕುರಿತಂತೆ ಡಿಕೆ ಶಿವಕುಮಾರ್ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಗ್ವಿ ಹಾಗೂ ಕಪಿಲ್ ಸಿಬಲ್ ವಾದ ಮಂಡಿಸಿದರು. ಸಿಬಿಐ ಕೇಂದ್ರ ಸರ್ಕಾರದ ಏಜೆಂಟ್ನಂತೆ ಕಾರ್ಯನಿರ್ವಹಿಸುತ್ತಿದೆ. ಸಿಬಿಐ ಗೆ ಯಾವ ರಸ್ತೆಗೆ ಹೋಗಬೇಕು ಯಾರ ಮನೆಗೆ ಹೋಗಬೇಕು ಸಿಬಿಐ ಎಲ್ಲಿಗೆ ಹೋಗಬೇಕೆಂದು ಕೇಂದ್ರ ಸರ್ಕಾರ ನಿರ್ಧರಿಸುತ್ತಿದೆ.
ಉಳಿದಂತೆ ಆ ತನಿಖೆಯು ಮಾತ್ರ ಸಿಬಿಐ ನಡೆಸುತ್ತಿದೆ.ಹೀಗಾಗಿ ಸಿಬಿಐ ತನಿಖೆ ಒಕ್ಕೂಟದ ವ್ಯವಸ್ಥೆಗೆ ಪೂರಕವಾಗಿಲ್ಲ ಎಂದು ಡಿ ಸಿ ಎಂ ಡಿ ಕೆ ಶಿವಕುಮಾರ್ ಪರ ಅಭಿಷೇಕ್ ಮನುಸಿಂಗ್ವಿ ವಾದ ಮಂಡಿಸಿದ್ದಾರೆ.
ಈ ವೇಳೆ ತಂದೆಯ ವಿಚಾರಣೆಯನ್ನು ಆಲಿಸಲು ಡಿಕೆ ಶಿವಕುಮಾರ್ ಅವರ ಪುತ್ರ ಆಕಾಶ್ ಆಗಮಿಸಿದ್ದರು.ಅವರು ಕೂಡ ಕಾನೂನು ಶಿಕ್ಷಣ ಪಡೆಯುತ್ತಿದ್ದು ಇಂದು ತಂದೆ ಡಿಕೆ ಶಿವಕುಮಾರ್ ಅವರ ವಿಚಾರಣೆ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಆಕಾಶ್ ಕೂಡ ಈ ಒಂದು ವಿಚಾರಣೆ ನಡೆಯುತ್ತಿದ್ದ ಸಂದರ್ಭದಲ್ಲಿ ಉಪಸ್ಥಿತಿ ಇದ್ದರು.