ಗದಗ : ಬಿತ್ತನೆ ಬೀಜ ತರುವ ವೇಳೆ ಸರ್ಕಾರಿ ಬಸ್ ಬೈಕ್ ಒಂದಕ್ಕೆ ಡಿಕ್ಕಿ ಹೊಡೆದಿರುವ ಪರಿಣಾಮ ಬೈಕ್ ನಲ್ಲಿ ತೆರಳುತ್ತಿದ್ದ ಇಬ್ಬರು ರೈತರು ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಹಳ್ಳಿಗುಡಿ ಎಂಬಲ್ಲಿ ಈ ಅಪಘಾತ ಸಂಭವಿಸಿದೆ.
ಹೌದು ಸರ್ಕಾರಿ ಬಸ್ ಡಿಕ್ಕಿಯಾಗಿ ಇಬ್ಬರು ಇಬ್ಬರು ರೈತರು ಸಾವನ್ನಪ್ಪಿದ್ದಾರೆ. ಬೈಕ್ ನಲ್ಲಿ ತೆರಳುತ್ತಿದ್ದ ಇಬ್ಬರು ರೈತರು ದುರ್ಮರಣ ಹೊಂದಿರುವ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಹಳ್ಳಿಗುಡಿ ಬಳಿ ಘಟನೆ ಸಂಭವಿಸಿದೆ.
ಹಳ್ಳಿಗುಡಿ ಗ್ರಾಮದ ರೈತ ಪರಸಪ್ಪ ಜೋಗಿನ ಹಾಗೂ ಪೇಠಾಲೂರು ಗ್ರಾಮದ ಮಾರುತಿ ಯಾಟಿ ಸಾವನ್ನಪ್ಪಿದ್ದಾರೆ. ಬಿತ್ತನೆ ಬೀಜ ಖರೀದಿಸಿ ಊರಿಗೆ ಬರುವಾಗ ಈ ಅಪಘಾತ ಸಂಭವಿಸಿದೆ. ಮುಂಡರಗಿ ಪೊಲೀಸ್ ಠಾಣೆಯಲ್ಲಿ ಘಟನೆ ಕುರಿತಂತೆ ಪ್ರಕರಣ ದಾಖಲಾಗಿದೆ.