ಬೆಂಗಳೂರು : ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಬಂಧನದ ಭೀತಿ ಎದುರಾಗಿರುವ ಹಿನ್ನೆಲೆಯಲ್ಲಿ ಇದೀಗ ಅವರು ನಿರೀಕ್ಷಣಾ ಜಾಮೀನು ಕೋರಿ ಅರ್ಜಿಯನ್ನು ಸಲ್ಲಿಸಿದ್ದಾರೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ.
ಈಗಾಗಲೇ ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಎಚ್ ಡಿ ರೇವಣ್ಣ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಶರತ್ತು ಬದ್ಧ ಜಾಮೀನು ಮಂಜೂರು ಮಾಡಿತ್ತು. ಇದೀಗ ಈ ಒಂದು ಪ್ರಕರಣದಲ್ಲಿ ಭವಾನಿ ರೇವಣ್ಣ ಹೆಸರು ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಇದೀಗ ಅವರು ಬಂಧನದ ಭೀತಿಯಿಂದ ನಿರೀಕ್ಷಣಾ ಜಾಮೀನು ಕೋರಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಅಲ್ಲಿ ಭವಾನಿ ರೇವಣ್ಣ ಅರ್ಜಿ ಸಲ್ಲಿಸಿದ್ದಾರೆ.