ತುಮಕೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ವಿದೇಶದಲ್ಲಿರುವ ಸಂಸದ ಪ್ರಜ್ವಲ ರೇವಣ್ಣ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಾರೆ ಈ ಕುರಿತಂತೆ ಪ್ರತಿಕ್ರಿಯೆ ನೀಡಿದ ಜಿ ಪರಮೇಶ್ವರ್ ಅವರು, ಪ್ರಜ್ವಲ್ ಪ್ರಕರಣದಲ್ಲಿ ಕೇಂದ್ರ ಸರ್ಕಾರ ನಮಗೆ ಸಹಕಾರ ಕೊಡಲಿಲ್ಲ ಎಂದರು.
ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ ಕೇಂದ್ರ ಸರ್ಕಾರದ ಮೇಲೆ ಗೂಬೆಕೂರಿಸಿದ ಗೃಹ ಸಚಿವ ಪರಮೇಶ್ವರ್, ಪ್ರಜ್ವಲ್ ಪ್ರಕರಣದಲ್ಲಿ ಕೇಂದ್ರ ಸರ್ಕಾರ ನಮಗೆ ಸಹಕಾರ ಕೊಡಲಿಲ್ಲ ಎಂದು ತುಮಕೂರಿನಲ್ಲಿ ಸಚಿವ ಜಿ ಪರಮೇಶ್ವರ್ ಹೇಳಿಕೆ ನೀಡಿದರು.
ರಾಜತಾಂತ್ರಿಕ ಪಾಸ್ಪೋರ್ಟ್ ರದ್ದು ಮಾಡುತ್ತೇವೆ ಎಂದು ಹೇಳಿದ್ದರೂ ಅಷ್ಟೇ ವಿದೇಶಾಂಗ ಇಲಾಖೆ ಸಚಿವರು ಪಾಸ್ ಪೋರ್ಟ್ ರದ್ದು ಮಾಡಿರಲಿಲ್ಲ ನಾವು ಬರೆದ ಪತ್ರಗಳಿಗೆ ಇನ್ನೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ತುಮಕೂರಿನಲ್ಲಿ ಗ್ರಹ ಇಲಾಖೆ ಸಚಿವ ಜಿ ಪರಮೇಶ್ವರ್ ತಿಳಿಸಿದರು.
ಪ್ರಜ್ವಲ್ ರೇವಣ್ಣ ವಿಡಿಯೋ ಮೂಲಕ ಇವತ್ತು ತಿಳಿಸಿದ್ದಾರೆ 31ರಂದು ಎಸ್ಐಟಿ ಅಧಿಕಾರಿಗಳ ಮುಂದೆ ಹಾಜರಾಗಿ ಸಾಕಾರ ನೀಡುತ್ತೇನೆ ಎಂದು ಹೇಳಿದ್ದಾರೆ ಅದನ್ನು ನಾನು ಸ್ವಾಗತ ಮಾಡುತ್ತೇನೆ. ಏಕೆಂದರೆ ನಾವು ಈಗಾಗಲೇ ಕರ್ನಾಟಕದ ಇತಿಹಾಸದಲ್ಲೇನೇ ಇಂತಹ ಘಟನೆ ನಡೆದಿರಲಿಲ್ಲ ಎಂದು ತಿಳಿಸಿದರು.