ತುಮಕೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ತಾನೇ ಶರಣಾದರು SIT ಅರೆಸ್ಟ್ ಮಾಡಿದರು ಬಂಧನ ಆಗೋದಂತೂ ಖಚಿತ ಎಂದು ಗೃಹ ಖಾತೆ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ತುಮಕೂರಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಪ್ರಜ್ವಲ್ ವಿರುದ್ಧ ಅರೆಸ್ಟ್ ವಾರಂಟ್ ಜಾರಿ ಆಗಿದೆ. ಬ್ಲೂ ಕಾರ್ನರ್ ನೋಟಿಸ್, ವಾರಂಟ್ ಜಾರಿ ಹಿನ್ನೆಲೆ ಅರೆಸ್ಟ್ ಮಾಡಬೇಕು. ಎಸ್ಐಟಿಯವರು ಯಾವ ರೀತಿ ಕ್ರಮ ತೆಗೆದುಕೊಳ್ಳತ್ತಾರೆಂದು ನೋಡಬೇಕು ಎಂದು ಹೇಳಿದ್ದಾರೆ.
ಪ್ರಜ್ವಲ್ ರೇವಣ್ಣ ವಿಡಿಯೋ ಮೂಲಕ ಇದೇ ತಿಂಗಳ 31 ರಂದು ಬೆಳಗ್ಗೆ 10 ಗಂಟೆಗೆ ಎಸ್ ಐಟಿ ಗೆ ಬರ್ತಿನಿ ಎಂದಿದ್ದಾರೆ. ಅವರಿಗೆ ಸಹಕಾರ ಮಾಡ್ತಿನಿ ಅಂತ ಹೇಳ್ತಿರೋದನ್ನ ನಾನು ಸ್ವಾಗತ ಮಾಡುತ್ತೇನೆ. ಕರ್ನಾಟಕದ ಇತಿಹಾಸದಲ್ಲಿ ಇಂತಹ ಘಟನೆ ನಡೆದಿರಲಿಲ್ಲ. ಇಡೀ ಜಗತ್ತೆ ಮಾತನಾಡುವ ಸಂದರ್ಭದಲ್ಲಿ ಅವರನ್ನ ಕರೆತರುವ ಪ್ರಯತ್ನವನ್ನ ಎಲ್ಲ ರೀತಿ ನಡೆಯುತ್ತಿತ್ತು.
ಪ್ರಧಾನಮಂತ್ರಿಗಳಿಗೆ, ಮುಖ್ಯಮಂತ್ರಿಗಳು ಎರಡು ಬಾರಿ ಪತ್ರ ಬರೆದಿದ್ದರು. ಸಿಬಿಐಗೆ ರಿಕ್ವೆಸ್ಟ್ ಮಾಡಿಕೊಂಡಿದ್ದೆವು. ಇಂಟರ್ ಪೋಲ್ ಗೆ ರಿಕ್ವೆಸ್ಟ್ ಮಾಡಿಕೊಂಡಿದ್ವಿ, ಮನವಿ ಮಾಡಿದ್ವಿ. ಬ್ಲೂ ಕಾರ್ನರ್ ನೋಟಿಸ್ ಕೂಡಾ ಇಶ್ಯೂ ಮಾಡಿದ್ದರು. ಆ ಪ್ರಕ್ರಿಯೆ ಕೂಡಾ ನಡೆಯುತ್ತಿತ್ತು.
ಪ್ರಧಾನಿಗೆ ಸಿಎಂ 2 ಸಲ ಪತ್ರ ಬರೆದಿದ್ದರು, ಸಿಬಿಐಗೆ ಮನವಿ ಮಾಡಿದ್ದೆವು. ಇಂಟರ್‌ಪೋಲ್‌ಗೂ ಮನವಿ ಮಾಡಿದ್ದು, ಬ್ಲೂಕಾರ್ನರ್ ನೋಟಿಸ್ ಸಹ ನೀಡಿದ್ದರು. ಪಾಸ್‌ಪೋರ್ಟ್ ರದ್ದು ಮಾಡಿ ಅಂತಾ ಕೇಂದ್ರಕ್ಕೂ ಮನವಿ ಮಾಡಿದ್ದೆವು. ಪಾಸ್‌ಪೋರ್ಟ್ ರದ್ದು ಪ್ರಕ್ರಿಯೆ ಆರಂಭಿಸಿದ್ದೇವೆ ಅಂತಾ ಕೇಂದ್ರ ಹೇಳಿತ್ತು. ಈ ಮಧ್ಯೆ ಪ್ರಜ್ವಲ್ ಬರುತ್ತೇವೆ ಅಂತಾ ಹೇಳಿದ್ದನ್ನು ಸ್ವಾಗತ ಮಾಡುತ್ತೇನೆ. ತಮ್ಮ ಬಳಿಯಿರುವ ಸಾಕ್ಷ್ಯ, ಮಾಹಿತಿ ಆಧರಿಸಿ SIT ತನಿಖೆ ಮುಂದುವರಿಸುತ್ತೆ ಎಂದರು.