ಬೆಂಗಳೂರು : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ ಖಂಡಿಸಿ ಮೇ.30ರಂದು ಹಾಸನ ಚಲೋ ಮಹಿಳಾ ಸಮಾವೇಶಕ್ಕೆ ಕರೆ ನೀಡಲಾಗಿದೆ.
ಈ ಕುರಿತು ಮಾಹಿತಿ ನೀಡಿರುವ ಜನಶಕ್ತಿ ಸಂಘಟನೆಯ ಮಲ್ಲಿಗೆ ಅವರು, ಪ್ರಜ್ವಲ್ ರೇವಣ್ಣ ಅವರಿಂದ ಮಹಿಳೆಯರಿಗಾದ ದೌರ್ಜನ್ಯ ವಿರೋಧಿಸಿ ಹಮ್ಮಿಕೊಂಡಿರುವ ಬೃಹತ್ ಸಮಾವೇಶದಲ್ಲಿ ಮಹಿಳೆಯರು, ರೈತರು, ಕಾರ್ಮಿಕರು, ಲಿಂಗತ್ವ ಅಲ್ಪಸಂಖಯಾತರು ಸೇರಿದಂತೆ 10 ಸಾವಿರ ಜನರು ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಪ್ರಜ್ವಲ್ ರೇವಣ್ಣ ಎಸಗಿದ ಲೈಂಗಿಕ ದೌರ್ಜನ್ಯ ಕ್ರೂರವಾಗಿದ್ದು, ಸಮಾಜ ಇದನ್ನು ತೀವ್ರವಾಗಿ ವಿರೋಧಿಸುತ್ತದೆ. ಆದರೆ, ಸರ್ಕಾರ ಹಾಗೂ ರಾಜಕೀಯ ನಾಯಕರು ತಪ್ಪಿತಸ್ಥರನ್ನು ಶಿಕ್ಷಿಸುವ ಬಗ್ಗೆ ಯೋಚಿಸದೆ ಪ್ರಕರಣದ ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ಹೋರಾಟಗಾರ್ತಿ ಅಕ್ಕೈ ಪದ್ಮಸಾಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.