ಬೆಳಗಾವಿ : ಮನೆಗೆ ದಿನಾಲು ಕುಡಿದು ಬಂದು ಗಲಾಟೆ ಮಾಡುತ್ತಿದ್ದನ್ನು ಪ್ರಶ್ನಿಸಿದ್ದ ಪತ್ನಿಯನ್ನು ಭೀಕರವಾಗಿ ಕೊಲೆ ಮಾಡಿರುವ ಪತಿ ನಂತರ ತಾನು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಪುಲಗಡ್ಡಿಯಲ್ಲಿ ನಡೆದಿದೆ.
ಮದ್ಯಪಾನ ಮಾಡಿ ಬಂದಿದ್ದನ್ನು ಪ್ರಶ್ನಿಸಿದ್ದಕ್ಕೆ ಪತ್ನಿಯನ್ನು ಕೊಂದು ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ ಪುಲಗಡ್ಡಿಯಲ್ಲಿ ನಡೆದಿದೆ. ತಡರಾತ್ರಿ ಯಲ್ಲವ್ವ ನಂದಿಯನ್ನು ಹತ್ಯೆ ಮಾಡಿದ ಅಣ್ಣಪ್ಪ ನಂದಿ ನೇಣಿಗೆ ಶರಣಾಗಿದ್ದಾನೆ.
ನಿನ್ನೆ ಸಂಜೆ ಎಮ್ಮೆ ಮಾರಿ ಆ ಹಣದಿಂದ ಕಂಠಪೂರ್ತಿ ಕುಡಿದು ಬಂದಿದ್ದ ಅಣ್ಣಪ್ಪ. ಇದನ್ನ ಪ್ರಶ್ನಿಸಿದ್ದಕ್ಕೆ ಯಲ್ಲವ್ವ ಹತ್ಯೆಗೈದು ಅಣ್ಣಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದೀಗ ಕುಟುಂಬದ ಸದಸ್ಯರ ಆಕ್ರಂದನ ಮುಗಿಲು ಮುಟ್ಟಿದ್ದು,ಮೂಡಲಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.