ನವದೆಹಲಿ:ಡೇರಾ ಮ್ಯಾನೇಜರ್ ರಂಜಿತ್ ಸಿಂಗ್ ಹತ್ಯೆ ಪ್ರಕರಣದಲ್ಲಿ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಮತ್ತು ಇತರ ನಾಲ್ವರನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಖುಲಾಸೆಗೊಳಿಸಿದೆ.
2021 ರಲ್ಲಿ, ವಿಶೇಷ ಸಿಬಿಐ ನ್ಯಾಯಾಲಯವು ರಾಮ್ ರಹೀಮ್ ಮತ್ತು ಇತರ ಆರೋಪಿಗಳನ್ನು ಸಿಂಗ್ ಹತ್ಯೆ ಪ್ರಕರಣದಲ್ಲಿ ತಪ್ಪಿತಸ್ಥರೆಂದು ಪರಿಗಣಿಸಿ, ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿತು.
ವಿಚಾರಣೆಯ ನಂತರ ಮಾತನಾಡಿದ ರಾಮ್ ರಹೀಮ್ ಪರ ವಕೀಲರು, “ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಅವರ ಮಾಜಿ ಮ್ಯಾನೇಜರ್ ರಂಜಿತ್ ಸಿಂಗ್ ಕೊಲೆ ಪ್ರಕರಣದಲ್ಲಿ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಖುಲಾಸೆಗೊಳಿಸಿದೆ ಎಂದರು.