Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಇರಾನ್ ಸುಪ್ರೀಂ ಲೀಡರ್ ಖಮೇನಿ ಕುಟುಂಬದ ಮೇಲೆ ದಾಳಿ: ಮಗಳು, ಮೊಮ್ಮಗಳು ಸೇರಿ ನಾಲ್ವರು ಮೃತ್ಯು!

01/03/2026 7:11 AM

ಟ್ರಂಪ್ ಮಾಸ್ಟರ್ ಪ್ಲಾನ್: ಇರಾನ್‌ನ ಮುಂದಿನ ನಾಯಕ ರೆಜಾ ಪಹ್ಲವಿ? ವಿಶ್ವ ರಾಜಕಾರಣದಲ್ಲಿ ಹೊಸ ಸಂಚಲನ!

01/03/2026 7:01 AM

BREAKING : ಹೋಳಿ ಹಬ್ಬಕ್ಕೂ ಮುನ್ನ ಗ್ರಾಹಕರಿಗೆ ಶಾಕ್ : `LPG’ ಸಿಲಿಂಡರ್ ಬೆಲೆ 28 ರೂ. ಏರಿಕೆ | LPG Cylinder Price

01/03/2026 6:51 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ: ತಕ್ಷಣ ಸಚಿವ ನಾಗೇಂದ್ರ ವಜಾಗೆ ಸಿ.ಟಿ ರವಿ ಆಗ್ರಹ
KARNATAKA

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ: ತಕ್ಷಣ ಸಚಿವ ನಾಗೇಂದ್ರ ವಜಾಗೆ ಸಿ.ಟಿ ರವಿ ಆಗ್ರಹ

By kannadanewsnow0928/05/2024 3:46 PM

ಬೆಂಗಳೂರು: ಶಿವಮೊಗ್ಗದ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರ್ ಅವರ ಆತ್ಮಹತ್ಯೆಗೆ ಕಾರಣರಾದ ಪರಿಶಿಷ್ಟ ವರ್ಗಗಳ ಕಲ್ಯಾಣ ಖಾತೆ ಸಚಿವ ನಾಗೇಂದ್ರ ಅವರನ್ನು ತಕ್ಷಣವೇ ವಜಾ ಮಾಡಿ, ಬಂಧಿಸಿ ತನಿಖೆ ನಡೆಸುವಂತೆ ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯದ ಮಾಜಿ ಸಚಿವ ಸಿ.ಟಿ.ರವಿ ಅವರು ಆಗ್ರಹಿಸಿದರು.

ಮಸ್ಕಿಯಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆತ್ಮಹತ್ಯೆ ಮಾಡಿಕೊಂಡಿರುವ ಅಧಿಕಾರಿ ಚಂದ್ರಶೇಖರ್ ಬರೆದಿಟ್ಟ ಡೆತ್ ನೋಟ್‍ನಲ್ಲಿ, ಪರಿಶಿಷ್ಟ ಪಂಗಡದ ಬಡವರಿಗೆ ಸೇರಬೇಕಾದ 187 ಕೋಟಿ ರೂ.ಗಳನ್ನು ಸಚಿವರ ಸೂಚನೆ ಮೇರೆಗೆ ನಕಲಿ ಖಾತೆಗಳಿಗೆ ವರ್ಗಾಯಿಸಿ ಅವ್ಯವಹಾರ ನಡೆಸಲಾಗಿದೆ ಎಂದು ನೇರ ಆರೋಪ ಮಾಡಿದ್ದಾರೆ. ನಿಗಮದ ಆಡಳಿತ ನಿರ್ದೇಶಕ ಹಾಗೂ ಅಧಿಕಾರಿಗಳು ನಕಲಿ ಖಾತೆಗಳನ್ನು ತೆರೆದು ಈ ಹಣವನ್ನು ವರ್ಗಾವಣೆ ಮಾಡಿಕೊಂಡಿದ್ದಾರೆ. ಹೀಗಾಗಿ ಈ ಎಲ್ಲರ ವಿರುದ್ಧ ತಕ್ಷಣವೇ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಕಾಂಗ್ರೆಸ್ ಸರಕಾರದ ಭ್ರಷ್ಟಾಚಾರಕ್ಕೆ ಇದಕ್ಕಿಂತ ದೊಡ್ಡ ಸಾಕ್ಷ್ಯ ಬೇರೆ ಅಗತ್ಯವಿಲ್ಲ. ಅಂದು ಬಿಜೆಪಿ ಸರಕಾರವಿದ್ದಾಗ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಆಗಿನ ವಿಪಕ್ಷ ನಾಯಕ, ಈಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಿನ ಕಂದಾಯ ಸಚಿವ ಕೆ.ಎಸ್.ಈಶ್ವರಪ್ಪನವರ ವಜಾಕ್ಕೆ ಆಗ್ರಹಿಸಿದ್ದರು. ಕಾನೂನು, ಸಂವಿಧಾನ ಎಂದೆಲ್ಲ ದೊಡ್ಡ ದೊಡ್ಡ ಮಾತುಗಳನ್ನು ಆಡುತ್ತ ಭಾರೀ ಗದ್ದಲವೆಬ್ಬಿಸಿದ್ದರು. ಈಗ ಅವರದೇ ಸರಕಾರವಿದೆ. ಅದೇ ಮಾತುಗಳನ್ನು ಈಗ ಹೇಳಲಿ ನೋಡೋಣ ಎಂದು ತರಾಟೆಗೆ ತೆಗೆದುಕೊಂಡರು. ಈ ಪ್ರಕರಣದಲ್ಲಿ ಸಚಿವ ನಾಗೇಂದ್ರ ಮತ್ತು ಇಲಾಖೆಯ ಆಪಾದಿತ ಅಧಿಕಾರಿಗಳ ವಿರುದ್ಧ ಕೊಲೆ ಪ್ರಕರಣ ಹಾಗೂ ಎಸ್‍ಸಿ, ಎಸ್‍ಟಿ ಕಾಯ್ದೆಯನ್ವಯ ಪ್ರಕರಣ ದಾಖಲಿಸಿ ತನಿಖೆ ನಡೆಸಬೇಕು ಎಂದು ಅವರು ಒತ್ತಾಯಿಸಿದರು.

ಬರೀ ಲೂಟಿಯಲ್ಲ, ಹಗಲು ದರೋಡೆ..

ಈ ಸರಕಾರದಲ್ಲಿ ನಡೆಯುತ್ತಿರುವುದು ಬರೀ ಲೂಟಿಯಲ್ಲ, ಹಗಲು ದರೋಡೆ. ಅಧಿಕಾರಿ ಚಂದ್ರಶೇಖರ್ ಸಾವಿಗೆ ಸಚಿವರೇ ನೇರ ಕಾರಣವಾಗಿದ್ದು, ಹೈಕೋರ್ಟ್ ಅಥವಾ ಸುಪ್ರೀಂ ಕೋರ್ಟಿನ ಹಾಲಿ ನ್ಯಾಯಾಧೀಶರಿಂದ ಸಮಗ್ರ ತನಿಖೆ ನಡೆಸಿ ಅಪರಾಧಿಗಳಿಗೆ ಶಿಕ್ಷೆ ವಿಧಿಸಬೇಕು ಎಂದು ಸಿ.ಟಿ ರವಿ ಅವರು ಹೇಳಿದರು.

ಪರಿಷತ್ ಚುನಾವಣೆಯಲ್ಲಿ ಆರೂ ಸ್ಥಾನಗಳು ಎನ್‍ಡಿಎಗೆ

ವಿಧಾನ ಪರಿಷತ್‍ನ ಮೂರು ಪದವೀಧರ ಕ್ಷೇತ್ರಗಳು ಮತ್ತು ಮೂರು ಶಿಕ್ಷಕಕರ ಕ್ಷೇತ್ರಗಳಿಗೆ ನಡೆಯುವ ಚುನಾವಣೆಯಲ್ಲಿ ಭಾರತೀಯ ಜನತಾಪಕ್ಷ-ಜೆಡಿಎಸ್ ಮೈತ್ರಿ ಅಭ್ಯರ್ಥಿಗಳು ಎಲ್ಲ ಆರೂ ಸ್ಥಾನಗಳನ್ನು ಗೆಲ್ಲುವುದು ನಿಶ್ಚಿತ ಎಂದು ಪ್ರತಿಪಾದಿಸಿದರು.

ನಾಲ್ಕು ಕ್ಷೇತ್ರಗಳಲ್ಲಿ ಬಿಜೆಪಿ ಹಾಗೂ ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಬೆಂಬಲದೊಂದಿಗೆ ಮೈತ್ರಿಪಕ್ಷ ಜಾತ್ಯತೀತ ಜನತಾ ದಳದ ಅಭ್ಯರ್ಥಿಗಳು ಸ್ಪರ್ಧೆ ಮಾಡಿದ್ದಾರೆ. ಈ ಭಾಗದಲ್ಲಿ ನಮ್ಮ ಅಭ್ಯರ್ಥಿ ಅಮರನಾಥ ಪಾಟೀಲ್ ಸ್ಪರ್ಧಿಸಿದ್ದಾರೆ. ಈ ಹಿಂದೆ ಅವರು ಪದವೀಧರ ಕ್ಷೇತ್ರವನ್ನು ಪ್ರತಿನಿಧಿಸಿ ಉತ್ತಮ ಕೆಲಸ ಮಾಡಿದ್ದಾರೆ. ಈ ಬಾರಿಯೂ ನಮ್ಮೆಲ್ಲ ಪ್ರಜ್ಞಾವಂತ ಮತದಾರ ಬಾಂಧವರು ಅವರನ್ನು ಬೆಂಬಲಿಸಿ ಗೆಲ್ಲಿಸಿ ವಿಧಾನ ಪರಿಷತ್‍ಗೆ ಆಯ್ಕೆ ಮಾಡಬೇಕೆಂದು ಮನವಿ ಮಾಡುತ್ತೇನೆ ಎಂದು ಸಿ.ಟಿ ರವಿ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಸ್ಕಿ ಶಾಸಕ ಡಾ. ಶಿವರಾಜ್ ಪಾಟೀಲ್ ಹಾಗೂ ಮಾಜಿ ಶಾಸಕ ಪ್ರತಾಪ್ ಗೌಡ ಸೇರಿದಂತೆ ಮುಖಂಡರು ಪಾಲ್ಗೊಂಡಿದ್ದರು.

‘ಆದಾಯ ತೆರಿಗೆ ಪಾವತಿ’ದಾರರೇ ಗಮನಿಸಿ: ಮೇ.31ರೊಳೆಗೆ ‘ಪ್ಯಾನ್’ಗೆ ಆಧಾರ್ ಲಿಂಕ್ ಮಾಡದಿದ್ರೇ, ದುಪ್ಪಟ್ಟು TDS ಫಿಕ್ಸ್

ಟ್ರೋಲಿಗರ ವಿರುದ್ಧ ಸಿಡಿದೆದ್ದ ‘ಬಿಗ್‌ ಬಾಸ್‌’ ಮಾಜಿ ಸ್ಪರ್ಧಿ ಸುಷ್ಮಾ ವೀರ್: ಸೈಬರ್ ಠಾಣೆಗೆ ದೂರು

Share. Facebook Twitter LinkedIn WhatsApp Email

Related Posts

ಕರ್ನಾಟಕದ ಗ್ರಾಮೀಣಗೆ ಜನತೆಗೆ ಗುಡ್ ನ್ಯೂಸ್ : ‘ಗ್ರಾಮ ಪಂಚಾಯ್ತಿ’ಗಳಲ್ಲಿ ಸಿಗಲಿದೆ ಈ ಎಲ್ಲಾ ಸೌಲಭ್ಯಗಳು !

01/03/2026 6:45 AM6 Mins Read

SHOCKING : ಬೆಂಗಳೂರಲ್ಲಿ ಘೋರ ದುರಂತ : ಸಂಪ್ ಸ್ವಚ್ಛಗೊಳಿಸಲು ಇಳಿದಿದ್ದ ಮೂವರು ಉಸಿರುಗಟ್ಟಿ ಸಾವು !

01/03/2026 6:42 AM1 Min Read

ಉತ್ತರ ಕರ್ನಾಟಕದ ಜನತೆಗೆ ಶಾಕ್ : `IMD’ಯಿಂದ ಮುಂದಿನ 3 ತಿಂಗಳು ಬಿಸಿಗಾಳಿ ಮುನ್ನೆಚ್ಚರಿಕೆ !

01/03/2026 6:32 AM1 Min Read
Recent News

BREAKING: ಇರಾನ್ ಸುಪ್ರೀಂ ಲೀಡರ್ ಖಮೇನಿ ಕುಟುಂಬದ ಮೇಲೆ ದಾಳಿ: ಮಗಳು, ಮೊಮ್ಮಗಳು ಸೇರಿ ನಾಲ್ವರು ಮೃತ್ಯು!

01/03/2026 7:11 AM

ಟ್ರಂಪ್ ಮಾಸ್ಟರ್ ಪ್ಲಾನ್: ಇರಾನ್‌ನ ಮುಂದಿನ ನಾಯಕ ರೆಜಾ ಪಹ್ಲವಿ? ವಿಶ್ವ ರಾಜಕಾರಣದಲ್ಲಿ ಹೊಸ ಸಂಚಲನ!

01/03/2026 7:01 AM

BREAKING : ಹೋಳಿ ಹಬ್ಬಕ್ಕೂ ಮುನ್ನ ಗ್ರಾಹಕರಿಗೆ ಶಾಕ್ : `LPG’ ಸಿಲಿಂಡರ್ ಬೆಲೆ 28 ರೂ. ಏರಿಕೆ | LPG Cylinder Price

01/03/2026 6:51 AM

ಖಮೇನಿ ಅಂತ್ಯ: ಟ್ರಂಪ್ ಘೋಷಣೆ ಬೆನ್ನಲ್ಲೇ ಇರಾನ್ ಸುಪ್ರೀಂ ಖಾತೆಯಿಂದ ನಿಗೂಢ ಪೋಸ್ಟ್!

01/03/2026 6:48 AM
State News
KARNATAKA

ಕರ್ನಾಟಕದ ಗ್ರಾಮೀಣಗೆ ಜನತೆಗೆ ಗುಡ್ ನ್ಯೂಸ್ : ‘ಗ್ರಾಮ ಪಂಚಾಯ್ತಿ’ಗಳಲ್ಲಿ ಸಿಗಲಿದೆ ಈ ಎಲ್ಲಾ ಸೌಲಭ್ಯಗಳು !

By kannadanewsnow5701/03/2026 6:45 AM KARNATAKA 6 Mins Read

ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯ್ತಿಗಳಲ್ಲಿ ಗ್ರಾಮೀಣ ಜನತೆಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ವಿವಿಧ ಸೇವೆಗಳನ್ನು ಒದಗಿಸಲಾಗುತ್ತಿದೆ. ಆ ಮೂಲಕ ಗ್ರಾಮೀಣ…

SHOCKING : ಬೆಂಗಳೂರಲ್ಲಿ ಘೋರ ದುರಂತ : ಸಂಪ್ ಸ್ವಚ್ಛಗೊಳಿಸಲು ಇಳಿದಿದ್ದ ಮೂವರು ಉಸಿರುಗಟ್ಟಿ ಸಾವು !

01/03/2026 6:42 AM

ಉತ್ತರ ಕರ್ನಾಟಕದ ಜನತೆಗೆ ಶಾಕ್ : `IMD’ಯಿಂದ ಮುಂದಿನ 3 ತಿಂಗಳು ಬಿಸಿಗಾಳಿ ಮುನ್ನೆಚ್ಚರಿಕೆ !

01/03/2026 6:32 AM

BIG NEWS : ಇಸ್ರೇಲ್-ಇರಾನ್ ಸಂಘರ್ಷ : ಕನ್ನಡಿಗರ ಸುರಕ್ಷತೆಗೆ ಸರ್ಕಾರ ಬದ್ಧ : CM ಸಿದ್ದರಾಮಯ್ಯ

01/03/2026 6:10 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.