ಬೆಂಗಳೂರು : ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ವಿಮಾನ ನಿಲ್ದಾಣ, ಆಡಳಿತ ಕಚೇರಿ ಸ್ಪೋಟಿಸುವುದಾಗಿ ಬೆದರಿಕೆ ಸಂದೇಶ ಬಂದಿದೆ.
ಬೆಂಗಳೂರು ಗ್ರಾಮಾಂತರ ಜಿಲೆಲಯ ದೇವನಹಳ್ಳಿ ಪಟ್ಟಣದಲ್ಲಿರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಸಂದೇಶ ಬರೆಯಲಾಗಿದ್ದು, ಏರ್ ಪೋರ್ಟ್ ಆಡಳಿತ ಮಂಡಳಿ ಕಚೇರಿ ಹಾಗೂ ಸಿಬ್ಬಂದಿ ಕಚೇರಿ ಸ್ಪೋಟಿಸುವುದಾಗಿ ಬಾತ್ ರೂಮ್ ನ ಕನ್ನಡಿ ಮೇಲೆ ಬೆದರಿಕೆ ಸಂದೇಶ ಬರೆಯಲಾಗಿದೆ.
ಕೂಡಲೇ ಶ್ವಾನದಳ, ಭದ್ರತಾ ಸಿಬ್ಬಂದಿಗಳು ತಪಾಸಣೆ ನಡೆಸಿದ್ದಾರೆ. ಬಳಿಕ ಹುಸಿಬಾಂಬ್ ಸಂದೇಶ ಅಂತ ನಿಟ್ಟುಸಿರು ಬಿಟ್ಟಿದ್ದಾರೆ. ಸಿಬ್ಬಂದಿಯೇ ಬೆದರಿಕೆ ಸಂದೇಶ ಬರೆದಿರುವ ಶಂಕೆ ವ್ಯಕ್ತವಾಗಿದ್ದು, ಏರ್ ಪೋರ್ಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.