ಬೆಂಗಳೂರು : 2024-25 ನೇ ಸಾಲಿನ ವರ್ಗಾವಣೆಯನ್ನು ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ (ವೈದ್ಯಾಧಿಕಾರಿಗಳು ಮತ್ತು ಇತರೆ ಸಿಬ್ಬಂದಿಯ ವರ್ಗಾವಣೆ ನಿಯಂತ್ರಣ) ಕಾಯ್ದೆಯಂತೆ ವರ್ಗಾವಣೆಗೆ ಅರ್ಜಿ ಆಹ್ವಾನಿಸಿ ಮಾರ್ಗಸೂಚಿಗಳ ಮೂಲಕ ಸಮಾಲೋಚನೆ ವರ್ಗಾವಣೆಗಾಗಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.
ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, 2024-25 ನೇ ಸಾಲಿನ ವರ್ಗಾವಣೆ ಪ್ರಕ್ರಿಯೆಯನ್ನು ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ (ವೈದ್ಯಾಧಿಕಾರಿಗಳು ಮತ್ತು ಇತರೆ ಸಿಬ್ಬಂದಿಯ ವರ್ಗಾವಣೆ ನಿಯಂತ್ರಣ) ಕಾಯ್ದೆ 2011, 2013 ಮತ್ತು 2017 ರಂತೆ ಕಾಲ ಕಾಲಕ್ಕೆ ಆದ ತಿದ್ದುಪಡಿಗಳ ಅನ್ವಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿನ ಅಧಿಕಾರಿ/ಸಿಬ್ಬಂದಿಗಳ ಸಮಾಲೋಚನೆ ವರ್ಗಾವಣೆ ಪ್ರಕ್ರಿಯೆಯನ್ನು ಪ್ರತಿ ವರ್ಷ ಏಪ್ರಿಲ್/ಮೇ ಮಾಹೆಯಲ್ಲಿ ವರ್ಗಾವಣೆ ಪ್ರಕ್ರಿಯೆಯು ಕೈಗೊಳ್ಳಬೇಕಾಗಿರುತ್ತದೆ ಆದರೆ 2024 ನೇ ಸಾಲಿನಲ್ಲಿ ಭಾರತ ಸರ್ಕಾರವು 2024 ರ ಲೋಕಸಭಾ ಚುನಾವಣೆ ಪ್ರಕ್ರಿಯೆ ಚಾಲನೆಯಲ್ಲಿದ್ದು, ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ವರ್ಗಾವಣೆ ಪ್ರಕ್ರಿಯೆಗಳು ಇಲಾಖೆಯಲ್ಲಿ ಪ್ರಾರಂಭಿಸಲು ಸಾಧ್ಯವಾಗಿರುವುದಿಲ್ಲ.
ಉಲ್ಲೇಖ (2) ರಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಹಾಗೂ ಸರ್ವ ವೃಂದಗಳ ಸಂಘ, ಆರೋಗ್ಯ ಇಲಾಖೆಯ ಎಲ್ಲಾ ಸಂಘದ ಪದಾಧಿಕಾರಿಗಳು ಪ್ರಾರಂಭಿಸಲು ಒತ್ತಾಯಿಸುತ್ತಿರುತ್ತಾರೆ. 2020 ನೇ ಸಾಲಿನಲ್ಲಿ ಕೋವಿಡ್-19 ರೋಗ 2020, 2021, 2022 ಮತ್ತು 2023 ಈ ಎಲ್ಲಾ ವರ್ಷಗಳಲ್ಲಿ ಸಮಾಲೋಚನೆ ವರ್ಗಾವಣೆ ಪ್ರಕ್ರಿಯೆಗಳು ನಡೆದಿರುವುದಿಲ್ಲ, ಈ ಹಿನ್ನೆಲೆಯಲ್ಲಿ ಇಲಾಖೆಯ ಎಲ್ಲಾ ವೃಂದದ ಅಧಿಕಾರಿಗಳು ಸಮಾಲೋಚನೆ ವರ್ಗಾವಣೆ ಪ್ರಕ್ರಿಯೆ ಕೈಗೊಳ್ಳುವಂತೆ ಒತ್ತಾಯಿಸುತ್ತಿರುವುದರಿಂದ 2024-25 ನೇ ಸಾಲಿನಲ್ಲಿ ಗ್ರೂಪ್ ‘ಎ’ ಗ್ರೂಪ್ ‘ಬಿ’, ಗ್ರೂಪ್ ‘ಸಿ’ ಮತ್ತು ಗ್ರೂಪ್ ‘ಡಿ’ ವರ್ಗದ ಅಧಿಕಾರಿ/ನೌಕರರಿಗೆ ವೃಂದ ಬಲದ ಮೀರದಂತೆ ಸಮಾಲೋಚನೆ ವರ್ಗಾವಣೆ ಪ್ರಕ್ರಿಯೆ ಕೈಗೊಳ್ಳಲು ಈ ಕೆಳಗಿನ ಮಾರ್ಗಸೂಚಿಗಳನ್ವಯ ಅನುಮತಿ ನೀಡಲು ಕೋರಿದೆ.