ಬೆಂಗಳೂರು : ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ SIT ಅಧಿಕಾರಿಗಳು ಇಬ್ಬರು ಆರೋಪಿಗಳಾದ ನವೀನ್ ಗೌಡ ಹಾಗೂ ಚೇತನನ್ನು SIT ಅಧಿಕಾರಿಗಳು ಇಂದು ಕೋರ್ಟಿಗೆ ಹಾಜರುಪಡಿಸಿದರು.
ಆರೋಪಿಗಳನ್ನು ಹಾಸನದ 5ನೇ ಹೆಚ್ಚುವರಿ ಸಿವಿಲ್, JMFC ಕೋರ್ಟಿಗೆ SIT ಅಧಿಕಾರಿಗಳು ಹಾಜರುಪಡಿಸಿದರು. ಆರೋಪಗಳಾದ ನವೀನ್ ಗೌಡ, ಚೇತನ್ ಎನ್ನುವವರು ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋಗಳಿರುವ ಪೆನ್ ಡ್ರೈವ್ ಗಳನ್ನು ಹಂಚಿಕೆ ಮಾಡಿದ್ದಾರೆ ಎನ್ನುವ ಆರೋಪ ಕೇಳಿಬಂದಿತ್ತು.ಇದೀಗ ಆರೋಪಿಗಳನ್ನು ಬಂಧಿಸಿ ಇಂದು ಕೋರ್ಟಿಗೆ ಹಾಜರುಪಡಿಸಲಾಗಿದೆ.
ಇನ್ನು ನಿನ್ನೆ ಪೆನ್ ಡ್ರೈವ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಎಸ ಐ ಟಿ ಅಧಿಕಾರಿಗಳು ಆರೋಪಿಗಳಾದ ನವೀನ್ ಗೌಡ ಹಾಗೂ ಚೇತನ್ ನನ್ನು ಬಂಧಿಸಿದ್ದರು.ಹೈಕೋರ್ಟಿಗೆ ಜಾಮೀನು ಸಲ್ಲಿಸಿದ್ದ ಹಿನ್ನೆಲೆಯಲ್ಲಿ ಇಂದು ಅವರು ಹೈಕೋರ್ಟಿಗೆ ಬಂದಿದ್ದರು. ಈ ಬವೇಳೆ ನವೀನ ಗೌಡ ಹಾಗೂ ಚೇತನನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಆರೋಪಿಗಳು ಹೈಕೋರ್ಟ್ ಗೆ ಬಂದಿದ್ದ ವೇಳೆ ಎಸ್ಐಟಿ ಅಧಿಕಾರಿಗಳು ಅವರನ್ನು ಬಂಧಿಸಿದ್ದರು.
ನವೀನ್ ಗೌಡ ಅರೆಸ್ಟ್ ಆಗದ ಬಗ್ಗೆ ಸಾಕಷ್ಟು ಅನುಮಾನ ಹುಟ್ಟು ಹಾಕಿತ್ತು ಈ ಬಗ್ಗೆ ಎಚ್ ಡಿ ಕುಮಾರಸ್ವಾಮಿ ಸೇರಿದಂತೆ ಹಲವು ನಾಯಕರು ಪ್ರಶ್ನೆ ಮಾಡಿದ್ದರು ಇದೀಗ ಕೊನೆಗೂ ಇಬ್ಬರು ಆರೋಪಿಗಳನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ ಹೈಕೋರ್ಟ್ ನಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದ ಆರೋಪಿಗಳು. ಹೀಗಾಗಿ ಹೈಕೋರ್ಟ್ ಕಡೆ ಬಂದಿದ್ದ ಇಬ್ಬರನ್ನು ಎಸ್ ಐ ಟಿ ಅಧಿಕಾರಿಗಳು ಬಂಧಿಸಿದ್ದರು.