ಬೆಂಗಳೂರು: ಬಿಟ್ ಕಾಯಿನ್ ಪ್ರಕರಣ ಸಂಬಂಧ ಈಗಾಗಲೇ ಕಿಂಗ್ ಪಿನ್ ಶ್ರೀಕಿ ಆಲಿಯಾಸ್ ಶ್ರೀಕೃಷ್ಣನನ್ನು ಬಂಧಿಸಲಾಗಿದೆ. ಇದೇ ಪ್ರಕರಮದಲ್ಲಿ ಈಗ ಸಿಐಡಿ ಪೊಲೀಸರು, ಸೈಬರ್ ಕ್ರೈಂ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಚಂದ್ರಾಧರ್ ಎಂಬುವರನ್ನು ಬಂಧಿಸಲಾಗಿದೆ.
ಬಿಟ್ ಕಾಯಿನ್ ಪ್ರಕರಣ ಬೆಳಕಿಗೆ ಬರುತ್ತಿದ್ದಂತ ಅದನ್ನು ಮೊದಲು ಟೇಕ್ ಓವರ್ ಮಾಡಿ, ತನಿಖೆ ನಡೆಸಿದ್ದೇ ಸೈಬರ್ ಕ್ರೈಂ ಠಾಣೆಯ ಪೊಲೀಸರು. ಅಂದು ಸೈಬರ್ ಕ್ರೈಂ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಆಗಿದ್ದಂತ ಚಂದ್ರಾಧರ್ ಅವರು, ಈ ಹಗರಣದಲ್ಲಿ ಭಾಗಿಯಾಗಿದ್ದರು ಎಂಬುದಾಗಿ ಸಿಐಡಿ ಅಧಿಕಾರಿಗಳ ತನಿಖೆಯಲ್ಲಿ ತಿಳಿದು ಬಂದಿತ್ತು.
ಈ ಸಂಬಂಧ ತನಿಖೆ ನಡೆಸಿದಂತ ಪೊಲೀಸರು ಇದೀಗ ಸಿಐಡಿ ಪೊಲೀಸರು, ಸೈಬರ್ ಕ್ರೈಂ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಚಂದ್ರಾಧರ್ ಅವರನ್ನು ಬಂಧಿಸಿದ್ದಾರೆ. ಈ ಮೂಲಕ ಬಿಟ್ ಕಾಯಿನ್ ಹಗರಣದಲ್ಲಿ ಮತ್ತೊಬ್ಬ ಆರೋಪಿಯನ್ನು ಬಂಧಿಸಿದಂತೆ ಆಗಿದೆ.
‘ಜರ್ಮನಿ’ಯಲ್ಲಿ ಇಲ್ವ ಸಂಸದ ಪ್ರಜ್ವಲ್ ರೇವಣ್ಣ? ‘ದುಬೈ’ನಲ್ಲಿ ಇರುವ ಬಗ್ಗೆ ‘ರಾಜ್ಯ ಸರ್ಕಾರ’ಕ್ಕೆ ಮಾಹಿತಿ
ಮೇ 31ರೊಳಗೆ ಪ್ಯಾನ್ ಅನ್ನು ಆಧಾರ್ ಕಾರ್ಡ್‌ನೊಂದಿಗೆ ಲಿಂಕ್ ಮಾಡಿ: ತೆರಿಗೆದಾರರಿಗೆ ಆದಾಯ ತೆರಿಗೆ ಇಲಾಖೆ ಸೂಚನೆ