ಬೆಂಗಳೂರು: ಮೈಸೂರಿನ ಕೆ ಆರ್ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದಂತ ಮಹಿಳೆ ಅಪಹರಣ ಪ್ರಕರಣ ಸಂಬಂಧ ಭವಾನಿ ರೇವಣ್ಣ ಸಲ್ಲಿಸಿದ್ದಂತ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೋರ್ಟ್ ನಡೆಸಿತು. ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ವಾದ-ಪ್ರತಿ ವಾದ ಆಲಿಸಿದ ಬಳಿಕ, ಮೇ.31ಕ್ಕೆ ನಿರೀಕ್ಷಣಾ ಜಾಮೀನು ಅರ್ಜಿಯ ತೀರ್ಪು ಕಾಯ್ದಿರಿಸಿದೆ.
ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಭವಾನಿ ರೇವಣ್ಣ ಸಲ್ಲಿಸಿದ್ದಂತ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ನಡೆಯಿತು. ಎಸ್ಐಟಿ ಪರ ಎಸ್ ಪಿಪಿ ಅವರು ಭವಾನಿ ರೇವಣ್ಣ ಅವರಿಗೆ ಜಾಮೀನು ನೀಡದಂತೆ ಆಕ್ಷೇಪಣೆಯನ್ನು ಸಲ್ಲಿಸಿ ವಾದ ಮಂಡಿಸಿದರು. ಭವಾನಿ ಪರ ಹಿರಿಯ ವಕೀಲ ಸಂದೇಶ್ ಚೌಟ ಅವರು ಜಾಮೀನು ನೀಡುವಂತೆ ಮನವಿ ಮಾಡಿದರು.
ಮೈಸೂರಿನ ಕೆ ಆರ್ ನಗರ ಠಾಣೆಯಲ್ಲಿ ದಾಖಲಾಗಿದ್ದಂತ ಭವಾನಿ ರೇವಣ್ಣ ವಿರುದ್ಧದ ಮಹಿಳೆ ಅಪಹರಣ ಪ್ರಕರಣ ಸಂಬಂಧದ ಜಾಮೀನು ಅರ್ಜಿಯ ವಾದ ಪ್ರತಿವಾದ ಆಲಿಸಿದಂತ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು, ಮೇ.31ಕ್ಕೆ ಆದೇಶ ಕಾಯ್ದಿರಿಸಿ ಮುಂದೂಡಿಕೆ ಮಾಡಿದೆ. ಈ ಮೂಲಕ ಇಂದು ಭವಾನಿ ರೇವಣ್ಣಗೆ ರಿಲೀಫ್ ಸಿಗದಂತೆ ಆಗಿದೆ.
BREAKING: ‘ಬಿಟ್ ಕಾಯಿನ್ ಹಗರಣ’ದಲ್ಲಿ CID ಪೊಲೀಸರಿಂದ ‘ಇನ್ಸ್ ಪೆಕ್ಟರ್ ಚಂದ್ರಾಧರ್’ ಬಂಧನ
ಮೇ 31ರೊಳಗೆ ಪ್ಯಾನ್ ಅನ್ನು ಆಧಾರ್ ಕಾರ್ಡ್‌ನೊಂದಿಗೆ ಲಿಂಕ್ ಮಾಡಿ: ತೆರಿಗೆದಾರರಿಗೆ ಆದಾಯ ತೆರಿಗೆ ಇಲಾಖೆ ಸೂಚನೆ