ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅವರು ತಮ್ಮ ವಿರುದ್ಧದ ಮೂರು ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ಕೋರಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆಯನ್ನು ಮೇ.31ಕ್ಕೆ ಕೋರ್ಟ್ ಮುಂದೂಡಿದೆ.
ಅಶ್ಲೀಲ ವೀಡಿಯೋ ಕೇಸ್ ನಂತ್ರ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹಾರಿ ತಲೆ ಮರೆಸಿಕೊಂಡಿದ್ದಾರೆ. ಅವರ ಬಂಧನಕ್ಕೆ ಎಸ್ಐಟಿ ವಾರೆಂಟ್ ಕೂಡ ಪಡೆದಿದೆ. ಇದರ ನಡುವೆ ವಿದೇಶದಿಂದಲೇ ತಮ್ಮ ವಕೀಲರ ಮೂಲಕ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.
ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ವಿಚಾರಣೆ ಕೈಗೆತ್ತಿಕೊಂಡ ನಂತ್ರ, ಜಾಮೀನು ಅರ್ಜಿಯ ವಿಚಾರಣೆಯನ್ನು ಮೇ.31ಕ್ಕೆ ಮುಂದೂಡಿದೆ.
ಮೇ.3ಕ್ಕೆ ಬೆಂಗಳೂರಿಗೆ ಪ್ರಜ್ವಲ್ ಬರುತ್ತಿದ್ದಾರೆ. ಅಂದೇ ವಿಚಾರಣೆ ನಡೆಸೋದಕ್ಕೆ ಅವಕಾಶ ನೀಡುವಂತೆ ಪ್ರಜ್ವಲ್ ಪರ ವಕೀಲರು ಮನವಿ ಮಾಡಿದ್ದರು. ಈ ಹಿನ್ನಲೆಯಲ್ಲಿ ಎಸ್ಐಟಿಗೆ ನೋಟಿಸ್ ಜಾರಿಗೊಳಿಸಿ, ವಿಚಾರಣೆಯನ್ನು ಮೇ.31ಕ್ಕೆ ಮುಂದೂಡಿಕೆ ಮಾಡಿದೆ.
BREAKING: ಮಹಿಳೆ ಅಪಹರಣ ಕೇಸ್: ಮೇ.31ಕ್ಕೆ ಭವಾನಿ ರೇವಣ್ಣ ಜಾಮೀನು ಆದೇಶದ ತೀರ್ಪು ಕಾಯ್ದಿರಿಸಿದ ಕೋರ್ಟ್
ಮೇ 31ರೊಳಗೆ ಪ್ಯಾನ್ ಅನ್ನು ಆಧಾರ್ ಕಾರ್ಡ್‌ನೊಂದಿಗೆ ಲಿಂಕ್ ಮಾಡಿ: ತೆರಿಗೆದಾರರಿಗೆ ಆದಾಯ ತೆರಿಗೆ ಇಲಾಖೆ ಸೂಚನೆ