ಶಿವಮೊಗ್ಗ: ರಾಜ್ಯ ಸರ್ಕಾರಿ ನೌಕರರ ಬಹು ದಿನಗಳ ಬೇಡಿಕೆಯನ್ನು ಈಗಾಗಲೇ ಈಡೇರಿಸೋದಾಗಿ ಚುನಾವಣಾ ಪೂರ್ವ ಪ್ರಣಾಳಿಕೆಯಲ್ಲೇ ಕಾಂಗ್ರೆಸ್ ಪಕ್ಷದಿಂದ ಘೋಷಣೆ ಮಾಡಲಾಗಿದೆ. NPS ರದ್ದುಗೊಳಿಸಿ OPS ಜಾರಿಗೊಳಿಸೋದು ಖಚಿತ. ಇದು ನಮ್ಮ ಕಾಂಗ್ರೆಸ್ ಸರ್ಕಾರದ 6ನೇ ಗ್ಯಾರಂಟಿಯಾಗಿದೆ ಅಂತ ನೈರುತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಡಾ.ಕೆ.ಕೆ ಮಂಜುನಾಥ್ ಕುಮಾರ್ ಹೇಳಿದ್ದಾರೆ.
ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ನುಡಿದಂತೆ ನಡೆದ ಸರ್ಕಾರ ನಮ್ಮದಾಗಿದೆ. ನಮ್ಮ ಸರ್ಕಾರದ ಅವಧಿಯಲ್ಲಿ ಘೋಷಿಸಿದಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲಾಗಿದೆ ಎಂದರು.
ರಾಜ್ಯ ಸರ್ಕಾರಿ ನೌಕರರ ಬಹು ದಿನಗಳ ಬೇಡಿಕೆಯಾದ NPS ರದ್ದುಗೊಳಿಸಿ, OPS ಜಾರಿಗೆ ಸಿಎಂ ಸಿದ್ಧರಾಮಯ್ಯ ಅವರು ಕ್ರಮ ವಹಿಸಲಿದ್ದಾರೆ. NPS ರದ್ದುಗೊಳಿಸಿ OPS ಜಾರಿಗೊಳಿಸೋದು ಖಚಿತವಾಗಿದೆ. ಇದು ನಮ್ಮ 6ನೇ ಗ್ಯಾರಂಟಿಯಾಗಿದೆ. ನೈರುತ್ಯ ಶಿಕ್ಷಕರ ಕ್ಷೇತ್ರದ ಮತದಾರರು ತಮಗೆ ಮತನೀಡಿ ಗೆಲ್ಲಿಸುವಂತೆ ಮನವಿ ಮಾಡಿದರು.
ಕಾಂಗ್ರೆಸ್ ಸರ್ಕಾರಕ್ಕೆ ಶಿಕ್ಷಕರ ಕಳಕಳಿಯಿದೆ. ಅನುದಾನಿತ ಶಾಲಾ ಶಿಕ್ಷಕರಿಗೆ ಪಿಂಚಣಿ ವ್ಯವಸ್ಥೆಯನ್ನು ಜಾರಿಗೊಳಿಸಲಾಗುತ್ತದೆ. ಅನುದಾನಿತ ಶಾಲಾ ಶಿಕ್ಷಕರನ್ನು ಕೂಲಿ ಮಾಡುವಂತೆ ಪರಿಸ್ಥಿತಿಗೆ ಈ ಹಿಂದಿನ ಬಿಜೆಪಿ ಸರ್ಕಾರ ತಂದಿತ್ತು ಎಂಬುದಾಗಿ ಕಿಡಿಕಾರಿದರು.
ಶಿಕ್ಷಕರ ಸಮಸ್ಯೆಯನ್ನು ಸರ್ಕಾರಕ್ಕೆ ಮನವರಿಕೆ ಮಾಡಿ, ನಿವಾರಿಸೋದಕ್ಕೆ ಕ್ರಮವಹಿಸಲಾಗುತ್ತದೆ. ಅನುದಾನ ರಹಿತ ಶಾಲಾ ಶಿಕ್ಷಕರಿಗೆ 15 ಲಕ್ಷದವರೆಗೆ ಜೀವ ವಿಮಾ ಸೌಲಭ್ಯ ಕಲ್ಪಿಸೋ ನಿಟ್ಟಿನಲ್ಲಿ ಸರ್ಕಾರದ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಈ ಮೂಲಕ ವಿಮಾ ಭದ್ರತೆಯನ್ನು ಒದಗಿಸಲಾಗುತ್ತದೆ. ಇದಲ್ಲದೇ ವೈದ್ಯಕೀಯ ಸೇವೆಯ ಸೌಲಭ್ಯವನ್ನು ಅನುದಾನ ರಹಿತ ಶಾಲಾ ಶಿಕ್ಷಕರಿಗೆ ಕಲ್ಪಿಸೋ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ಮುಂದಾಗಿದೆ ಎಂದರು.
ಖಾಸಗಿ ಶಾಲೆಗಳು ನೋಂದಣಿ ಮಾಡಿಸೋ ಪ್ರಕ್ರಿಯೆಯಲ್ಲಿ ಕೆಲ ಗೊಂದಲಗಳಿವೆ. ಹಳೆಯ ನಿಯಮಗಳಿಂದ ಮರು ನೋಂದಣಿಗೆ ಸಮಸ್ಯೆ ಉಂಟಾಗುತ್ತಿದೆ. ಆ ನಿಯಮಗಳನ್ನು ಸಡಿಲಗೊಳಿಸೋ ಭರವಸೆಯನ್ನು ನೈರುತ್ಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಕೆ ಕೆ ಮಂಜುನಾಥ್ ಕುಮಾರ್ ನೀಡಿದರು.
ಈ ಸಂದರ್ಭದಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ಸೇರಿದಂತೆ ವಿವಿಧ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು, ನೈರುತ್ಯ ಶಿಕ್ಷಕರ ಕ್ಷೇತ್ರದ ಮತದಾರರು ಉಪಸ್ಥಿತರಾಗಿದ್ದರು.
ದೆಹಲಿಯಲ್ಲಿ 52 ಡಿಗ್ರಿ ದಾಟಿದ ಉಷ್ಣಾಂಶ, ಭಾರತದಲ್ಲಿ ದಾಖಲಾದ ಗರಿಷ್ಠ ತಾಪಮಾನ | Temperature Hits in Delhi
ಮೇ 31ರೊಳಗೆ ಪ್ಯಾನ್ ಅನ್ನು ಆಧಾರ್ ಕಾರ್ಡ್‌ನೊಂದಿಗೆ ಲಿಂಕ್ ಮಾಡಿ: ತೆರಿಗೆದಾರರಿಗೆ ಆದಾಯ ತೆರಿಗೆ ಇಲಾಖೆ ಸೂಚನೆ