ಬೆಂಗಳೂರು: ರಾಜ್ಯ ಸರ್ಕಾರದಿಂದ ವಾಲ್ಮೀಕಿ ಅಭಿವೃದ್ಧಿ ನಿಗಮದ ಪ್ರಭಾರಿ ಎಂಡಿಯಾಗಿ ಡಾ.ಕೆಆರ್ ರಾಜ್ ಕುಮಾರ್ ನೇಮಕ ಮಾಡಿ ಆದೇಶಿಸಿದೆ. ಈ ಮೊದಲು ಇದ್ದಂತ ಎಂಡಿ ಜೆ.ಜಿ ಪದ್ಮನಾಭ ಅವರನ್ನು ಅಮಾನತುಗೊಳಿಸಿತ್ತು. ಈ ಬೆನ್ನಲ್ಲೇ ಆ ಖಾಲಿ ಸ್ಥಾನಕ್ಕೆ ಪ್ರಭಾರಿ ಎಂಡಿಯಾಗಿ ಡಾ.ಕೆ ಆರ್ ರಾಜ್ ಕುಮಾರ್ ನೇಮಕ ಮಾಡಿ ಆದೇಶಿಸಿದೆ.
ಈ ಕುರಿತಂತೆ ಇಂದು ಪರಿಶಿಷ್ಯ ಪಂಗಡಗಳ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಭವ್ಯ ಎಂ.ಜೆ ಅವರು ಅಧಿಸೂಚನೆ ಹೊರಡಿಸಿದ್ದಾರೆ. ಅದರಲ್ಲಿ ಡಾ|| ಕೆ.ಆರ್ ರಾಜ್ಕುಮಾರ್, ಜಂಟಿ ನಿರ್ದೇಶಕರು, ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ, ಬೆಂಗಳೂರು ಇವರನ್ನು ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ, ಬೆಂಗಳೂರು ಇಲ್ಲಿ ಖಾಲಿ ಇರುವ ವ್ಯವಸ್ಥಾಪಕ ನಿರ್ದೇಶಕರ ಹುದ್ದೆಗೆ ಹೆಚ್ಚುವರಿ ಪ್ರಭಾರದಲ್ಲಿರಿಸಿ ಆದೇಶಿಸಿದ್ದಾರೆ.
ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಆತ್ಮಹತ್ಯೆ ಕೇಸ್: ರಾಜ್ಯ ಸರ್ಕಾರದಿಂದ ‘MD, ಅಕೌಂಟ್ ಆಫೀಸರ್’ ಅಮಾನತು
ಬೆಂಗಳೂರು: ವಾಲ್ಮೀಕ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣದ ನಂತ್ರ, ರಾಜ್ಯ ಸರ್ಕಾರದ ಹಾಲಿ ವ್ಯವಸ್ಥಾಪಕ ನಿರ್ದೇಶಕ ಹಾಗೂ ಅಕೌಂಟ್ ಆಫೀಸರ್ ಅಮಾನತುಗೊಳಿಸಿ ಆದೇಶಿಸಿದೆ.
ಈ ಸಂಬಂಧ ಪರಿಶಿಷ್ಟ ಪಂಗಡಗಡ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿ ಹೊರಡಿಸಿದ್ದಾರೆ. ಅದರಲ್ಲಿ ಜೆ.ಜಿ ಪದ್ಮನಾಭ, ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ಮಹರ್ಷಿ ವಾಲ್ಮೀಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ, ಬೆಂಗಳೂರು ಇವರ ವಿರುದ್ಧದ ಆರೋಪಗಳ ಹಿನ್ನಲೆಯಲ್ಲಿ ಇಲಾಖಾ ವಿಚಾರಣೆಯನ್ನು ಕಾಯ್ದಿರಿಸಿ, ಕರ್ನಾಟಕ ನಾಗರೀಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು 1957ರ ನಿಯಮ 10(1)(ಡಿ) ರನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿ ಆದೇಶಿಸಿದ್ದಾರೆ.
ಇನ್ನೂ ಅಕೌಂಟ್ ಆಫೀಸರ್ ಆಗಿದ್ದಂತ ಪರಶುರಾಮ್ ಜಿ ದುರ್ಗಣ್ಣನವರ್ ಎಂಬುವರನ್ನು ಇಲಾಖಾ ವಿಚಾರಣೆಯನ್ನು ಕಾಯ್ದಿರಿಸಿ ಈ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿದ್ದಾರೆ. ಅಮಾನತ್ತಿನ ಅವಧಿಯಲ್ಲಿ ಕರ್ನಾಟಕ ನಾಗರೀಕ ಸೇವಾ ನಿಯಮಗಳ ನಿಯಮ-98ರನ್ವಯ ಜೀವನಾಧಾರ ಭತ್ಯೆಯನ್ನು ಪಡೆಯಲು ಅರ್ಹರಿರುತ್ತಾರೆ. ಈ ಅಧಿಕಾರಿಯು ಅಮಾನತ್ತಿನ ಅವಧಿಯಲ್ಲಿ ಸಕ್ಷಮ ಪ್ರಾಧಿಕಾರದ ಅನುಮತಿಯಿಲ್ಲದೇ ಕೇಂದ್ರ ಸ್ಥಾನವನ್ನು ಬಿಟ್ಟು ಹೋಗುವಂತಿಲ್ಲ ಎಂದು ಸೂಚಿಸಿದ್ದಾರೆ.
ಮೇ 31ರೊಳಗೆ ಪ್ಯಾನ್ ಅನ್ನು ಆಧಾರ್ ಕಾರ್ಡ್ನೊಂದಿಗೆ ಲಿಂಕ್ ಮಾಡಿ: ತೆರಿಗೆದಾರರಿಗೆ ಆದಾಯ ತೆರಿಗೆ ಇಲಾಖೆ ಸೂಚನೆ