ಬೆಂಗಳೂರು : ಇತ್ತೀಚಿಗೆ ರಾಜ್ಯದಲ್ಲಿ ಕ್ಷುಲ್ಲಕ ಕಾರಣಕ್ಕೆ ಗಲಾಟೆ, ಕೊಲೆ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿವೆ. ಇದೀಗ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಬಿಲ್ಲಿನಕೋಟೆ ಎಂಬ ಗ್ರಾಮದಲ್ಲಿ ಬೈಕ್ ಟಚ್ ಆಗಿದ್ದನ್ನು ಪ್ರವೇಶಿಸಿದ್ದಕ್ಕೆ ಹಿಂದು ಯುವಕನ ಮೇಲೆ ಅನ್ಯಕೋಮಿನ ಇಬ್ಬರು ಯುವಕರಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ಹೌದು ಅನ್ಯ ಕೋವಿನ ಇಬ್ಬರು ಯುವಕರಿಂದ ಹಿಂದೂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿರುವ ಘಟನೆ ಬಿಲ್ಲಿನಕೋಟೆಯಲ್ಲಿ ಶ್ರೀನಿವಾಸಮೂರ್ತಿ ಎಂಬುವವರ ಮೇಲೆ ಹಲ್ಲೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಗ್ರಾಮದಲ್ಲಿ ಈ ಒಂದು ಘಟನೆ ಸಂಭವಿಸಿದೆ.ನದೀಮ್, ಇಮ್ರಾನ್ ಹಾಗೂ ಮತ್ತೊಬ್ಬನಿಂದ ಹಲ್ಲೆ ನಡೆದಿದೆ.
ಅಲ್ಲದೆ ಅಂಗಡಿಗೆ ನುಗ್ಗಿ ಗಲಾಟೆ ಮಾಡಿದ್ದಾರೆ ಎನ್ನಲಾಗಿದೆ. ಶ್ರೀನಿವಾಸಮೂರ್ತಿಗೆ ದಾಬಸ್ಪೇಟೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಇದೀಗ ಚಿಕಿತ್ಸೆ ನೀಡಲಾಗುತ್ತಿದೆ. ಮುನ್ನೆಚ್ಚರಿಕೆಯಿಂದ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಸ್ಥಳಕ್ಕೆ ಎಸ್‌ಪಿ ಮಲ್ಲಿಕಾರ್ಜುನ್ ಬಾಲದಂಡಿ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ. ದಾಬಸ್ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.