ನವದೆಹಲಿ: ನವದೆಹಲಿ: ಕಾಂಗ್ರೆಸ್ ಮುಖಂಡ ಶಶಿ ತರೂರ್ ಅವರ ಆಪ್ತ ಸಹಾಯಕ ಶಿವ ಕುಮಾರ್ ಪ್ರಸಾದ್ ಅವರನ್ನು ದುಬೈನಿಂದ ಚಿನ್ನ ಕಳ್ಳಸಾಗಣೆ ಮಾಡಿದ ಆರೋಪದ ಮೇಲೆ ದೆಹಲಿ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇಂದಿರಗಾಂಧಿ ವಿಮಾನ ನಿಲ್ದಾಣದ ಟರ್ಮಿನಲ್ 3 ರಲ್ಲಿ ಶಿವ ಪ್ರಸಾದ್ ಅವರನ್ನು ಕಸ್ಟಮ್ಸ್ ಅಧಿಕಾರಿಗಳು ಬುಧವಾರ (ಮೇ 29) ವಶಕ್ಕೆ ಪಡೆದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮೂಲಗಳ ಪ್ರಕಾರ, ದುಬೈನಿಂದ ತಂದ 500 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳುವಾಗ ಕಸ್ಟಮ್ಸ್ ಇಂದಿರ ಗಾಂಧಿ ವಿಮಾನ ನಿಲ್ದಾಣದಿಂದ ಶಿವಕುಮಾರ್ ಅವರನ್ನು ಬಂಧಿಸಿದೆ ಎನ್ನಲಾಗಿದೆ.
First CM Secy involved in Gold smuggling
Now Cong MP "aide"/PA detained for Gold smuggling
CPM and Cong – both INDI alliance partners – alliance of gold smugglers 😅🤬😡🤮 https://t.co/TiCLWMZV0Z
— Rajeev Chandrasekhar 🇮🇳(Modiyude Kutumbam) (@Rajeev_GoI) May 30, 2024