ಬೆಂಗಳೂರು : ಬೆಂಗಳೂರಿನಲ್ಲಿ ತಡರಾತ್ರಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ಮನೆಯಲ್ಲಿದ್ದ ಗ್ಯಾಸ್ ಸಿಲಿಂಡರ್ ಸೋರಿಕೆಯಾಗಿ ಒಂದೇ ಕುಟುಂಬದ ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಬೆಂಗಳೂರಿನ ಸಂಪಿಗೆ ಹಳ್ಳಿಯಲ್ಲಿ ಘಟನೆ ನಡೆದಿದ್ದು, ರಾತ್ರಿ ಮಲಗಿದ್ದ ವೇಳೆ ಗ್ಯಾಸ್ ಸಿಲಿಂಡರ್ ಸೋರಿಯಾಗಿ ದಂಪತಿ, ಮೂವರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಗೊಂಡವರನ್ನು ನೇಪಾಳ ಮೂಲದ ಮದನ್ ಚೌಹಾರ್, ಪತ್ನಿ ಪ್ರೇಮ, ಮಕ್ಕಳಾದ ಹಿರದ್, ಪ್ರಶಾಂತ್, ಅನಿತಾ ಎಂದು ಗುರುತಿಸಲಾಗಿದೆ. ಸದ್ಯ ಗಾಯಗೊಂಡವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.