ಬೆಂಗಳೂರು: ಜರ್ಮನಿಯ ಮ್ಯೂನಿಚ್ ಏರ್ಪೋರ್ಟ್ ನಿಂದ ಬೆಂಗಳೂರಿಗೆ ಬರೋದಕ್ಕಾಗಿ ಸಂಸದ ಪ್ರಜ್ವಲ್ ರೇವಣ್ಣ ಆಗಮಿಸಿ, ತಮ್ಮ ಲಗೇಜ್ ಕೂಡ ಚೆಕ್ ಇನ್ ಮಾಡಿದ್ದಾರೆ. ಇಂದೇ ಬೆಂಗಳೂರಿಗೆ ಆಗಮಿಸೋ ಸಾಧ್ಯತೆ ಇದೆ. ಹೀಗಾಗಿ ಅವರನ್ನು ಬಂಧಿಸೋದಕ್ಕಾಗಿ ಎಸ್ಐಟಿ ಅಧಿಕಾರಿಗಳು ಸಕಲ ಸಿದ್ಧತೆ ಕೈಗೊಂಡಿದ್ದಾರೆ.
ಅಶ್ಲೀಲ ವೀಡಿಯೋ ಪ್ರಕರಣದ ಬಳಿಕ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಪಲಾಯನ ಮಾಡಿದ್ದರು. ತಿಂಗಳಾನುಗಟ್ಟಲೇ ವಿದೇಶದಲ್ಲೇ ಇದ್ದಂತ ಅವರು, ಈಗ ಬೆಂಗಳೂರಿನತ್ತ ಬರೋದಕ್ಕೆ ಹೊರಟಿದ್ದಾರೆ.
ಜರ್ಮನಿಯ ಮ್ಯೂನಿಚ್ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ಟಿಕೆಟ್ ಬುಕ್ ಮಾಡಿದ್ದಾರೆ ಎಂಬುದಾಗಿ ಎಸ್ಐಟಿ ಅಧಿಕಾರಿಗಳ ಮೂಲಗಳಿಂದ ತಿಳಿದು ಬಂದಿದೆ. ಈಗಾಗಲೇ ಮ್ಯೂನಿಚ್ ವಿಮಾನ ನಿಲ್ದಾಣಕ್ಕೆ ಬಂದಿರುವಂತ ಅವರು, 2 ಟ್ರಾಲಿ ಬ್ಯಾಗ್ ಲಗೇಜ್ ಗಳನ್ನು ಚೆಕ್ ಇನ್ ಮಾಡಿರೋದಾಗಿ ಹೇಳಲಾಗುತ್ತಿದೆ.
ಜರ್ಮನಿಯ ಮ್ಯೂನಿಚ್ ವಿಮಾನ ನಿಲ್ದಾಣದಿಂದ ಲುಫ್ತಾನ್ಸ್ ಏರ್ ಲೈನ್ಸ್ ವಿಮಾನದ ಮೂಲಕ ಬೆಂಗಳೂರಿಗೆ ಸಂಸದ ಪ್ರಜ್ವಲ್ ರೇವಣ್ಣ ಆಗಮಿಸುತ್ತಿದ್ದಾರೆ. ಇಂದೇ ಬೆಂಗಳೂರಿಗೆ ಆಗಮಿಸೋದು ಕನ್ಫರ್ಮ್ ಆಗಿದೆ. ಹೀಗಾಗಿ ಸಂಸದ ಪ್ರಜ್ವಲ್ ರೇವಣ್ಣ ಬೆಂಗಳೂರಿಗೆ ಆಗಮಿಸಿದ ಕೂಡಲೇ ಎಸ್ಐಟಿ ಅಧಿಕಾರಿಗಳು ಬಂಧಿಸೋದಕ್ಕೆ ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ.
ಸಂಸದ ಪ್ರಜ್ವಲ್ ರೇವಣ್ಣ ಬಂಧನದ ಬಳಿಕ ಮುಂದಾಗಲಿರುವಂತ ಕಾನೂನು ಸುವ್ಯವಸ್ಥೆಯ ಕ್ರಮಗಳ ಬಗ್ಗೆಯೂ ಹಿರಿಯ ಪೊಲೀಸ್ ಅಧಿಕಾರಿಗಳು ಸಭೆ ನಡೆಸಿ, ಚರ್ಚಿಸಿದ್ದಾರೆ ಎನ್ನಲಾಗುತ್ತಿದೆ. ಎಲ್ಲೆಲ್ಲಿ ಪೊಲೀಸರ ಭದ್ರತೆಯನ್ನು ಹೆಚ್ಚಿಸಬೇಕು. ಎಲ್ಲಿ ಪೊಲೀಸರನ್ನು ಭದ್ರತೆಗಾಗಿ ನಿಯೋಜಿಸಬೇಕು ಎಂಬುದಾಗಿಯೂ ತಯಾರಿ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.
ಒಟ್ಟಿನಲ್ಲಿ ಜರ್ಮನಿಯಿಂದ ಬೆಂಗಳೂರಿಗೆ ಸಂಸದ ಪ್ರಜ್ವಲ್ ರೇವಣ್ಣ ಆಗಮಿಸುತ್ತಿದ್ದಂತೆ, ಅವರನ್ನು ಕೆಂಪೇಗೌಡ ವಿಮಾನ ನಿಲ್ದಾಣದಲ್ಲೇ ಎಸ್ಐಟಿ ಪೊಲೀಸರು ಬಂಧಿಸೋದು ಫಿಕ್ಸ್ ಎನ್ನಲಾಗುತ್ತಿದೆ.
ಮಂಡ್ಯ ಜಿಲ್ಲೆಯ ಸಕ್ಕರೆ ಕಾರ್ಖಾನೆಗಳು ತಮ್ಮ ವ್ಯಾಪ್ತಿಯೊಳಗಿನ ಕಬ್ಬನ್ನು ಮಾತ್ರ ಖರೀದಿಸಬೇಕು: DC ಡಾ.ಕುಮಾರ
BREAKING : ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ : ಹೊತ್ತಿ ಉರಿದ ಪ್ಲಾಸ್ಟಿಕ್ ಗಮ್ ಟೇಪ್ ತಯಾರಿಕಾ ಕಾರ್ಖಾನೆ