ಬೆಂಗಳೂರು: ಜೂನ್.1ರಂದು ಕೆಪಿಸಿಸಿ ಪದಾಧಿಕಾರಿಗಳು ಮತ್ತು ಜಿಲ್ಲಾ ಕಾಂಗ್ರೆಸ್ ಸಮಿತಿಗಳ ಅಧ್ಯಕ್ಷರ ಸಭೆಯನ್ನು ನಡೆಸೋದಕ್ಕೆ ನಿಗದಿ ಪಡಿಸಲಾಗಿತ್ತು. ಈ ಸಭೆಯನ್ನು ಮುಂದೂಡಿಕೆ ಮಾಡಲಾಗಿದೆ.
ಇಂದು ಪತ್ರಿಕಾ ಪ್ರಕಟಣೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ ಚಂದ್ರಶೇಖರ್ ಮಾಹಿತಿ ನೀಡಿದ್ದು, ಪಕ್ಷದ ಸಂಘಟನೆ, ಬಲವರ್ಧನೆ ಇನ್ನಿತರ ಪ್ರಮುಖ ಪಕ್ಷ ಸಂಘಟನಾತ್ಮಕ ವಿಷಯಗಳ ಬಗ್ಗೆ ಚರ್ಚಿಸಲು ದಿನಾಂಕ 01-06-2024ರ ಶನಿವಾರ ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಸಭೆ ಕರೆಯಲಾಗಿತ್ತು ಎಂದಿದ್ದಾರೆ.
ಜೂನ್.1ರಂದು ನಿಗದಿ ಪಡಿಸಲಾಗಿದ್ದಂತ ಕೆಪಿಸಿಸಿ ಪದಾಧಿಕಾರಿಗಳ ಮತ್ತು ಜಿಲ್ಲಾ ಕಾಂಗ್ರೆಸ್ ಸಮಿತಿಗಳ ಅಧ್ಯಕ್ಷರು, ಮುಂಚೂಣಿ ಘಟಕ, ವಿಭಾಗ ಮತ್ತು ಸೆಲ್ ಗಳ ರಾಜ್ಯ ಅಧ್ಯಕ್ಷರುಗಳ ಸಭೆಯನ್ನು ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರಗಳ ಚುನಾವಣೆ ಹಿನ್ನಲೆಯಲ್ಲಿ ಮುಂದೂಡಲಾಗಿದೆ. ಮುಂದಿನ ಸಭೆಯ ದಿನಾಂಕವನ್ನು ಮುಂಚಿತವಾಗಿ ತಿಳಿಸಲಾಗುತ್ತದೆ ಎಂದು ಹೇಳಿದ್ದಾರೆ.
BREAKING : ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ : ಹೊತ್ತಿ ಉರಿದ ಪ್ಲಾಸ್ಟಿಕ್ ಗಮ್ ಟೇಪ್ ತಯಾರಿಕಾ ಕಾರ್ಖಾನೆ