ಬೆಂಗಳೂರು: ತಮ್ಮ ವಿರುದ್ಧ ಕೇರಳದಲ್ಲಿ ಶತ್ರು ಭೈರವಿ ಯಾಗವೊಂದನ್ನು ಮಾಡಿಸಲಾಗುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ವಿರುದ್ಧವಾಗಿ, ಸಿಎಂ ಸಿದ್ದರಾಮಯ್ಯನವರ ವಿರುದ್ಧವಾಗಿ ಹಾಗೂ ಸರ್ಕಾರದ ವಿರುದ್ದವಾಗಿ ಕೇರಳದ ರಾಜರಾಜೇಶ್ವರಿ ನಗರದಲ್ಲಿ ಈ ಯಾಗವನ್ನು ಮಾಡಿಸಲಾಗುತ್ತಿದೆ ಅಂತ ಹೇಳಿದರು.
ಇನ್ನೂ “ಕೇರಳದ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಈ ಯಾಗ ನಡೆಯುತ್ತಿದೆ. ಉತ್ತರ ಭಾರತದಿಂದ ಬಂದಿರುವ ಅಘೋರಿಗಳ ತಂಡವೊಂದು ಈ ಯಾಗವನ್ನು ನಡೆಸುತ್ತಿದ್ದಾರೆ. ಅಷ್ಟೇ ಅಲ್ಲ, ಈ ಯಾಗದಲ್ಲಿ ಪಂಚ ಬಲಿಯನ್ನೂ ನೀಡಲಾಗುತ್ತಿದೆ’’ ಎಂದು ಅವರು ತಿಳಿಸಿದರು. 21 ಮೇಕೆ, 3 ಎಮ್ಮೆ, 21 ಕುರಿಗಳು ಸೇರಿದಂತೆ ಪಂಚ ಬಲಿ ಕೊಡುತ್ತಿದ್ದಾರೆ. ಅವರ ಪ್ರಯತ್ನ ನಡೀತಾ ಇದೆ ಎಂದಿದ್ದಾರೆ.